ರಾಜ್ಯದಲ್ಲಿ ಪಡಿತರ ಇ-ಕೆವೈಸಿ ಕಡ್ಡಾಯ: ಇಲ್ಲದಿದ್ದರೆ ರೇಷನ್ ಕಾರ್ಡ್ ರದ್ದು -ಸಚಿವ ಮುನಿಯಪ್ಪ

Prakhara News
1 Min Read

ರಾಜ್ಯದಲ್ಲಿ ಪಡಿತರ ಚೀಟಿದಾರರು ಇ-ಕೆವೈಸಿಯನ್ನು ಆದಷ್ಟು ಬೇಗನೆ ಮಾಡಬೇಕು ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಒಂದು ತಿಂಗಳು ಕಾಲಾವಕಾಶ ನೀಡಬೇಕು. ಆಗಲೂ ಇ-ಕೆವೈಸಿ ಮಾಡಿಸದೆ ಇದ್ದರೆ ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸುವುದಾಗಿ ಎಚ್ಚರಿಕೆ ನೀಡಬೇಕು ಎಂದು ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡುತ್ತಾ ಹೇಳಿದರು.

ಆಹಾರ ಧಾನ್ಯಗಳು ಗೋದಾಮುಗಳಲ್ಲಿ ಹಾಳಾಗದಂತೆ ನೋಡಿಕೊಳ್ಳಿ. ಕನಿಷ್ಠ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿ ಮಾಡುವ ಆಹಾರ ಧಾನ್ಯಗಳನ್ನು ಸುರಕ್ಷಿತವಾಗಿ ಸಂರಕ್ಷಣೆ ಮಾಡಬೇಕು, ಅನಗತ್ಯ ಕಾರ್ಡ್‌ಗಳು ವಿತರಣೆ ಮಾಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

Share This Article
Leave a Comment