ಧರ್ಮಸ್ಥಳ ವ್ಯಾಪ್ತಿಯಲ್ಲಿ ಶವ ಹೂತಿಟ್ಟ 13 ಜಾಗ ತೋರಿಸಿದ ಅನಾಮಿಕ : ರಾತ್ರಿಯಿಡೀ ಬಿಗಿ ಭದ್ರತೆ

Prakhara News
1 Min Read

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಶವಗಳನ್ನು ಹೂತು ಹಾಕಿರುವುದಾಗಿ ಹೇಳಲಾದ ಸ್ಥಳಗಳಲ್ಲಿ ಮಹಜರು ನಡೆಸಲಾಗಿದ್ದು, ಒಟ್ಟು 13 ಜಾಗಗಳನ್ನು ದೂರುದಾರ ತೋರಿಸಿದ್ದಾರೆ.

ವಿಶೇಷ ತನಿಖಾ ತಂಡ ಸೋಮವಾರ ಸಂಜೆ 6 ಗಂಟೆ ತನಕ ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮಹತ್ವದ ಮಹಜರು ಕಾರ್ಯ ನಡೆಸಿತು. ದೂರುದಾರ ಅನಾಮಿಕ ವ್ಯಕ್ತಿಯನ್ನು ಮುಸುಕುಧಾರಿಯಾಗಿ ಕರೆತಂದ ಎಸ್ಐಟಿ ತಂಡ ಬೆಳಗ್ಗಿನಿಂದ ಸಂಜೆಯವರೆಗೂ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಅರಣ್ಯ ಪ್ರದೇಶದ ನಿಗೂಢ ಸ್ಥಳಗಳಿಗೆ ಕರೆದೊಯ್ದು ಮಹಜರು ಕಾರ್ಯ ನಡೆಸಿತು. ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ 13 ಜಾಗಗಳನ್ನು ಎಸ್ಐಟಿ ಅಧಿಕಾರಿಗಳಿಗೆ ದೂರುದಾರ ತೋರಿಸಿದ್ದಾರೆ.

ಈ ಜಾಗಗಳಲ್ಲಿ ರಾತ್ರಿಯಿಡಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಇಂದೂ ಕೂಡ ಮಹಜರು ಕಾರ್ಯ ಮುಂದುವರಿಯಲಿದೆ ಎಂದು ಹೇಳಲಾಗಿದೆ.

Share This Article
Leave a Comment