
Kammavari Education Institute Reddy Veeranna Sanjeevappa Residential School Environment Day Celebration

ನವನಗರ್ : ಕಮ್ಮವಾರಿ ಶಿಕ್ಷಣ ಸಂಸ್ಥೆ ರೆಡ್ಡಿ ವೀರಣ್ಣ ಸಂಜೀವಪ್ಪ ವಸತಿ ಶಾಲೆಯಲ್ಲಿ ಬುಧವಾರದಂದು ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.




ಸಂಸ್ಥೆಯ ಅಧ್ಯಕ್ಷರಾದ ಕೊಲ್ಲಾ ಶೇಷಗಿರಿರಾವ್ ಸಸಿ ನೆಟ್ಟು ನೀರುಣಿಸುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿ ಶೈಕ್ಷಣಿಕ ಜೀವನದಿಂದಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ಕನಿಷ್ಠ ಒಂದು ಗಿಡವನ್ನು ನೆಟ್ಟು ಬೆಳೆಸಬೇಕಾಗಿದೆ. ನಾಶ ಆಗುತ್ತಿರುವ ನಮ್ಮ ಪರಿಸರವನ್ನು ಉಳಿಸಿ ಬೆಳೆಸಬೇಕಾಗಿರುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ. ವಿದ್ಯಾರ್ಥಿ ಜೀವನದಿಂದಲೇ ಪರಿಸರ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದರು.


ನಂತರ ಶಿಕ್ಷಕ ಶಿಕ್ಷಕಿಯರಿಂದ ನೃತ್ಯರೂಪಕ, ನಾಟಕ, ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಚಾರ್ಯರದ ಕೆಎಸ್ ಗುರುಮಠ, ಬಾಲ ಗುರುಕುಲ ವಿಭಾಗದ ಮುಖ್ಯಸ್ಥರಾದ ಶ್ರೀದೇವಿ ಕೊಲ್ಲಾ, ಆರ್ ಎಸ್ ರಾವ್, ಸಂಸ್ಥೆಯ ಉಪ ಪ್ರಾಚಾರ್ಯರಾದ ವಸಂತ ದೇಸಾಯಿ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.Show more