Home ಪ್ರಖರ ವಿಶೇಷ ಶಕ್ತಿ ಯೋಜನೆ: ಮೂಲ ದಾಖಲೆ ತೋರಿಸಿ ಉಚಿತ ಬಸ್ ಪ್ರಯಾಣ ಮಾಡಿ

ಶಕ್ತಿ ಯೋಜನೆ: ಮೂಲ ದಾಖಲೆ ತೋರಿಸಿ ಉಚಿತ ಬಸ್ ಪ್ರಯಾಣ ಮಾಡಿ

0
Shakti Yojana: Show original document and get free bus travel

ಕೊಪ್ಪಳ ಜೂನ್ 08 (ಕರ್ನಾಟಕ ವಾರ್ತೆ): ಶಕ್ತಿ ಯೋಜನೆ ಅಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಜೂನ್ 11ರಂದು ಮಧ್ಯಾಹ್ನ 01 ಗಂಟೆಯಿಂದ ಅನ್ವಯವಾಗುವಂತೆ ಜಾರಿಗೊಳಿಸಲಾಗುತ್ತಿದೆ. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಪುರಾವೆಗಾಗಿ ತಮ್ಮ ಮೂಲ ದಾಖಲಾತಿಗಳನ್ನು ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
ಮೂಲ ದಾಖಲಾತಿಗಳ ವಿವರ: ಆಧಾರ್ ಕಾರ್ಡ, ಚುನಾವಣಾ ಆಯೋಗ ವಿತರಿಸಿರುವ ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಿಗೆ ಪತ್ರ, ವಾಸಸ್ಥಳ ನಮೂದಿಸಿರುವ ಭಾರತ ಸರ್ಕಾರದ ಇಲಾಖೆಗಳು, ಭಾರತ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ, ಸಂಸ್ಥೆಗಳು (ಪಿ.ಎಸ್.ಯು.ಎಸ್) ವಿತರಿಸಿರುವ ಗುರುತಿನ ಚೀಟಿ ಅಥವಾ ವಾಸಸ್ಥಳ ನಮೂದಿಸಿರುವಂತಹ ಕರ್ನಾಟಕ ಸರ್ಕಾರದ ಇಲಾಖೆಗಳು, ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ, ಸಂಸ್ಥೆಗಳು ವಿತರಿಸಿರುವ ಗುರುತಿನ ಚೀಟಿ ಅಥವಾ ಕರ್ನಾಟಕ ಸರ್ಕಾರದ ಅಂಗವಿಕಲರ ಮತ್ತು ಹಿರಿಯ ನಾಗರೀಕ ಕಲ್ಯಾಣ ನಿರ್ದೇಶನಾಲಯದವರು ವಿತರಿಸಿರುವ ಗುರುತಿನ ಚೀಟಿ. ಈ ಎಲ್ಲಾ ಗುರುತಿನ ಚೀಟಿಗಳಲ್ಲಿ ಯಾವುದಾದರು ಒಂದನ್ನು ತೋರಿಸಿ “ಶೂನ್ಯ ಮೊತ್ತದ ಟಿಕೇಟ್’’ ಪಡೆದು ಮಹಿಳೆಯರು ಜೂನ್ 11ರ ಮಧ್ಯಾಹ್ನ 01 ಗಂಟೆಯಿಂದ ಉಚಿತ ಸಾರಿಗೆ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here