Home ಪ್ರಖರ ವಿಶೇಷ ಜೂನ್ 09 ರಿಂದ ಜೂನ್ 11ರವರೆಗೆ ದ್ವಿತೀಯ ಅಧಿವೇಶನದ ಇಲಾಖೆ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಜೂನ್ 09 ರಿಂದ ಜೂನ್ 11ರವರೆಗೆ ದ್ವಿತೀಯ ಅಧಿವೇಶನದ ಇಲಾಖೆ ಪರೀಕ್ಷೆ: ನಿಷೇಧಾಜ್ಞೆ ಜಾರಿ

0
Second Session Department Examination from June 09 to June 11: Enforcement of Prohibition Order

ಕೊಪ್ಪಳ ಜೂನ್ 08 (ಕರ್ನಾಟಕ ವಾರ್ತೆ): ಕರ್ನಾಟಕ ಲೋಕಸೇವಾ ಆಯೋಗದಿಂದ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜೂನ್ 09ರಿಂದ ಜೂನ್ 11ರವರೆಗೆ 2023ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖೆ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಆದೇಶ ಹೊರಡಿಸಿದ್ದಾರೆ.
ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ಕೊಪ್ಪಳ ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಅಧಿವೇಶನದ ಇಲಾಖೆ ಪರೀಕ್ಷೆಗಳು ನಿಗದಿತ ದಿನಾಂಕದ ಬೆಳಿಗ್ಗೆ 9ರಿಂದ ಮಧ್ಯಾಹ್ನ 4 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಜಿರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿಧ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರದ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here