Prestige Schools Enrollment: Class 6th Entrance Exam on June 11
ಕೊಪ್ಪಳ ಜೂನ್ 09 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳ 6ನೇ ತರಗತಿಗೆ ಪ್ರವೇಶ ಪರೀಕ್ಷೆಯನ್ನು ಜೂನ್ 11ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಜವಾಹರ್ ರೋಡ್ ಮುಖ್ಯ ಅಂಚೆ ಕಚೇರಿಯ (ಅಶೋಕ ಸರ್ಕಲ್) ಹತ್ತಿರವಿರುವ ಸರಕಾರಿ ಬಾಲಕರ ಪದವಿ ಪೂರ್ವ (ಪ್ರೌಢ ವಿಭಾಗ) ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಪ್ರವೇಶ ಪತ್ರದೊಂದಿಗೆ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದ ಕೊಠಡಿಯಲ್ಲಿ ಖುದ್ದಾಗಿ ಹಾಜರಾಗಬೇಕು ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.