MLA M.R. Manjunath instructs doctors to spread information about fake clinics.
ವರದಿ :ಬಂಗಾರಪ್ಪ ಸಿ ಹನೂರು .
ಹನೂರು: ನಮ್ಮ ವಿಧಾನ ಸಭಾಕ್ಷೇತ್ರದಲ್ಲಿ ಈ ಹಿಂದೆ ಹಲವಾರು ನಕಲಿ ಕ್ಲೀನಿಕ್ ಗಳ ಹಾವಳಿ ಜಾಸ್ತಿಯಾಗಿವೆ ಆದರೆ ಇನ್ನು ಮುಂದೆ ಇಂತಹ ಕ್ಲೀನಿಕ್ ಗಳಿಂದ ಅಮಾಯಕರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ,ನನ್ನ ಕ್ಷೇತ್ರದಲ್ಲಿ ಇಂತಹ ಸಮಸ್ಯೆ ಕಂಡು ಬಂದರೆ ಹಿರಿಯ ಅಧಿಕಾರಿಗಳೆ ನೇರ ಹೊಣೆಯಾಗಬೇಕಾಗುತ್ತದೆ ಎಂದು ಶಾಸಕ ಎಂ ಆರ್ ಮಂಜುನಾಥ್ ಅಧಿಕಾರಿಗಳಿಗೆ ತಿಳಿಸಿದರು. ಇದೆ ಸಮಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಕಲಿ ಕ್ಲಿನಿಕ್ ಗಳ ಬಗ್ಗೆ ನಿಗಾ ವಹಿಸುವಂತೆ ತಾಲ್ಲೂಕು ವೈದ್ಯಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ವಿಶ್ವೇಶ್ವರಯ್ಯ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ
ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ಅಧ್ಯಕ್ಷೆ ಲಕ್ಷ್ಮೀ ಮಹೇಶ್ ರವರು ನಕಲಿ ಕ್ಲಿನಿಕ್ ಗಳು ಕಾರ್ಯ ನಿರ್ವಹಿಸುತ್ತಿವೆ ಎಂಬ ಬಗ್ಗೆ ಪ್ರಸ್ತಾಪ ಮಾಡಿದಾಗ
ಜಿಲ್ಲೆಯ ಯಾವುದೇ ಮೂಲೆಯಲ್ಲಿಯು ನಕಲಿ ವೈದ್ಯರು ಕ್ಲಿನಿಕ್ ತೆರೆದಿರುವ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಪ್ರತಿ ಖಾಸಗಿ ಕ್ಲಿನಿಕ್ ಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡುವ ಬಗ್ಗೆ ಈಗಾಗಲೇ ತಾಲ್ಲೂಕು ಆಡಳಿತ ವೈದ್ಯಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಹಾಗೇನಾದರೂ ನಮ್ಮ ಗಮನಕ್ಕೆ ಬಾರದೆ ನಕಲಿ ಕ್ಲಿನಿಕ್ ಗಳು ಇದ್ದರೆ ನಮಗೆ ಮಾಹಿತಿ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳುವುದಾಗಿ ವೈದ್ಯಾಧಿಕಾರಿಗಳು ತಿಳಿಸಿದರು.