Home ಪ್ರಖರ ವಿಶೇಷ ವಿಧಾನಸೌಧ ಮುಂಭಾಗ ನಡೆದ ಕರ‍್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು

ವಿಧಾನಸೌಧ ಮುಂಭಾಗ ನಡೆದ ಕರ‍್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು

0
Chief Minister Siddaramaiah launched the Shakti Yojana in a program held in front of Vidhana Soudha

ಬೆಂಗಳೂರು: ರಾಜ್ಯಾದ್ಯಂತ ಇಂದು ಮಧ್ಯಾಹ್ನದಿಂದ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಆರಂಭವಾಗಿದೆ. ವಿಧಾನಸೌಧ ಮುಂಭಾಗ ನಡೆದ ಕರ‍್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.


ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮ್ಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ಮೆಜೆಸ್ಟಿಕ್​ಗೆ ಒಟ್ಟಿಗೆ ಪ್ರಯಾಣ ಬೆಳೆಸಿದರು. ಈ ವೇಳೆ ಡಿಸಿಎಂ ಡಿಕೆಶಿ ಅವರು ಮಹಿಳೆರಿಗೆ ಉಚಿತವಾಗಿ ಟಿಕೆಟ್​ ಸಹ ವಿತರಣೆ ಮಾಡಿದರು. ಬಸ್​ ಮೆಜಿಸ್ಟಿಕ್ ತಲುಪಿದ ಬಳಿಕ ​ರ‍್ಮಸ್ಥಳಕ್ಕೆ ಹೊರಡುವ ಮೊದಲ ಬಸ್​ನಲ್ಲಿ ಸಿಎಂ ಸಿದ್ದರಾಮಯ್ಯ ಟಿಕೆಟ್ ವಿತರಣೆ ಮಾಡುವ ಮೂಲಕ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ ನೀಡಿದರು.

ಇದಕ್ಕೂ ಮುನ್ನ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕರ‍್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ದೀಪ ಬೆಳಗುವುದರ ಮೂಲಕ ಶಕ್ತಿ ಯೋಜನೆ ಉದ್ಘಾಟಿಸಿದರು. ಬಳಿಕ ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮರ‍್ಟ್ ಕರ‍್ಡ್ ಮಾದರಿಯನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಸಾಂಕೇತಿಕವಾಗಿ ಐದು ಮಹಿಳೆಯರಿಗೆ ಸ್ಮರ‍್ಟ್ ಕರ‍್ಡ್ ವಿತರಣೆ ಮಾಡಲಾಯಿತು.

ಕರ‍್ಯಕ್ರಮದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಸಚಿವರಾದ ಕೆ. ಜೆ. ಜರ‍್ಜ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕರಾದ ರಿಜ್ವಾನ್ ರ‍್ಷದ್, ಗೋವಿಂದರಾಜ್, ಬಿ ಕೆ ಹರಿಪಸ್ರಾದ್, ಯು. ಬಿ. ವೆಂಕಟೇಶ್, ನಾಗರಾಜ್ ಯಾದವ್ ಹಾಗೂ ಎ. ಸಿ. ವೆಂಕಟೇಶ ಉಪಸ್ಥಿತರಿದ್ದರು.

ರಾಜ್ಯ ರ‍್ಕಾರದ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯರ‍್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ (ಎ.ಸಿ. ಬಸ್ ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಶಕ್ತಿ ಯೋಜನೆ ಕುರಿತಂತೆ ಈ ಕೆಳಗಿನ ಷರತ್ತುಗಳನ್ನೂ ವಿಧಿಸಲಾಗಿದೆ..
೧. ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ (ಎಲ್ಲಾ ಅಂತರ ರಾಜ್ಯ ಸಾರಿಗೆ ಅನುಸೂಚಿಗಳನ್ನು ಹೊರತುಪಡಿಸಿ) ಈ ಯೋಜನೆ ಅನ್ವಯಿಸತಕ್ಕದ್ದು.

೨. ಐಷಾರಾಮಿ ಬಸ್‌ಗಳಾದ ರಾಜಹಂಸ, ನಾನ್ ಎ.ಸಿ. ಸ್ಲೀಪರ್ ಹಾಗೂ ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎ.ಸಿ. ಬಸ್‌ಗಳು) ಬಸ್​ಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ.

೩. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ರ‍್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯವ್ಯ ರ‍್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ರ‍್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲ ಬಸ್‌ಗಳಲ್ಲಿ (ಅಂತರರಾಜ್ಯ, ಎ.ಸಿ. ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಶೇ.೫೦ ಆಸನಗಳನ್ನು ಪುರುಷರಿಗೆ ಕಾಯ್ದಿರಿಸತಕ್ಕದ್ದು.

LEAVE A REPLY

Please enter your comment!
Please enter your name here