Notice to conduct health camp continuously: Shivraj Tandagi
ಕೊಪ್ಪಳ ಜೂನ್ 11 (ಕ.ವಾ.):
ವಾಂತಿ ಬೇಧಿ ಪ್ರಕರಣಗಳು ಕಂಡು ಬಂದ ಗ್ರಾಮಗಳಲ್ಲಿ ಆರೋಗ್ಯ ಶಿಬಿರಗಳನ್ನು ಇನ್ನಷ್ಟು ದಿನಗಳ ಕಾಲ ಮುಂದುವರೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು
ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜೂನ್ 11ರಂದು ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.
ವಾಂತಿ ಬೇಧಿ ಪ್ರಕರಣಗಳ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ತೀವ್ರ ನಿಗಾವಹಿಸಬೇಕು. ಪ್ರತಿ ದಿನ ಮನೆಮನೆ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸಬೇಕು ಎಂದು ಸಚಿವರು ಸೂಚನೆ ನೀಡಿದರು.
ಕುಟುಂಬದವರಿಗೆ ಸಾಂತ್ವನ:ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಬಿಜಕಲ್ ಗ್ರಾಮದ ನಿರ್ಮಲ ಅವರ ಮನೆಗೆ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲ ಅವರೊಂದಿಗೆ ತೆರಳಿದ ಸಚಿವರು ಮೃತರ ಕುಟುಂಬ ವರ್ಗದವರಿಗೆ
ಸಾಂತ್ವನ ಹೇಳಿದರು. ಮೃತರ ಕುಟುಂಬಕ್ಕೆ ಪರಿಹಾರ ಕೊಡಿಸುವುದಾಗಿ ತಿಳಿಸಿದರು.
ಬಿಜಕಲ್ ಗ್ರಾಮದಲ್ಲಿನ ವಾಂತಿ ಬೇಧಿ ಪ್ರಕರಣಗಳ ಬಗ್ಗೆ ಅಲ್ಲಿನ ಆರೋಗ್ಯಾಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.