Home ಪ್ರಖರ ವಿಶೇಷ ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಓಕೆ ಆದರೆ ವಿದ್ಯುತ್ ಬೆಲೆ ಇಳಿಕೆಗೆ ನಾಟ್ ಓಕೆ ಏಕೆ?- *ಆಪ್...

ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಓಕೆ ಆದರೆ ವಿದ್ಯುತ್ ಬೆಲೆ ಇಳಿಕೆಗೆ ನಾಟ್ ಓಕೆ ಏಕೆ?- *ಆಪ್ ರಾಜ್ಯ ಜಂಟಿ ಕಾರ್ಯದರ್ಶಿ ಶರಣಪ್ಪ ಸಜ್ಜಿಹೊಲ*

0
Why is it OK to revise textbooks but not OK to reduce electricity prices?- *App State Joint Secretary Sharanappa Sajjihola*

ಹಿಂದಿನ ಬಿಜೆಪಿ ಸರ್ಕಾರದಿಂದ ಸೇರಿಸಲಾದ ಕೆಲವು ಪಠ್ಯ ಮತ್ತು ವಿಷಯಗಳನ್ನು ಪರಿಷ್ಕರಣೆ ಮಾಡುವ ಮೂಲಕ ಅವುಗಳನ್ನು ತೆಗೆದುಹಾಕಲು ಪ್ರಯತ್ನ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ನೇತೃತ್ವದ ಈಗಿನ ಸರ್ಕಾರ ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಏರಿಸಿದ ವಿದ್ಯುತ್ ಬೆಲೆ ಏರಿಕೆಯನ್ನು ಪರಿಷ್ಕರಿಸಲು ಯಾಕೆ ಮನಸ್ಸು ಮಾಡುತ್ತಿಲ್ಲ? ಪಠ್ಯ ಪುಸ್ತಕ ಪರಿಷ್ಕರಣೆಗೆ ಯಾವ ಉದ್ದೇಶ ಇಟ್ಟುಕೊಂಡು ಮಾಡಲಾಗುತ್ತಿದೆ ಮತ್ತು ವಿದ್ಯುತ್ ಬೆಲೆ ಏರಿಕೆಯ ನಿರ್ಧಾರದ ಪರಿಷ್ಕರಣೆಯನ್ನು ಮಾಡದೆ ಇರುವುದರ ಹಿಂದಿನ ಉದ್ದೇಶ ಏನು ಎಂಬುದನ್ನು ಕರ್ನಾಟಕದ ಜನತೆ ತಿಳಿಯಲು ಬಯಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕೊಪ್ಪಳದ ಕುಕುನೂರಿನಲ್ಲಿ ಯಲಬುರ್ಗಾ ಶಾಸಕರಾದ ಬಸವರಾಜ್ ರಾಯರೆಡ್ಡಿ ಅವರಾಗಲಿ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿರುವುದು ಖಂಡನೀಯ, ಜನಪರ ಎಂದು ಹೇಳಿಕೊಳ್ಳುತ್ತಿರುವ ಸದ್ರಿಯವರು ಕರ್ನಾಟಕದ ಜನರಿಗೆ ಇದಕ್ಕೆ ಸೂಕ್ತ ಉತ್ತರ ಕೊಡಬೇಕಿದೆ. ಜನರಿಗೆ ಅನಾನುಕೂಲವಾಗುತ್ತಿರುವ ಮತ್ತು ಹೊರೆಯಾಗುತ್ತಿರುವ ವಿದ್ಯುತ್ ಬೆಲೆ ಏರಿಕೆಯ ನಿರ್ಧಾರದ ಪರಿಷ್ಕರಣೆಗೆ ಕರ್ನಾಟಕ ರಾಜ್ಯ ಸರ್ಕಾರ ಈ ಕೂಡಲೇ ಮನಸ್ಸು ಮಾಡಬೇಕಿದೆ. ಆಮ್ ಆದ್ಮಿ ಪಕ್ಷದ ದೆಹಲಿ ಮತ್ತು ಪಂಜಾಬ್ ಸರ್ಕಾರಗಳನ್ನು ನೋಡಿ ಜನರಿಗೆ ವಿದ್ಯುತ್ತನ್ನು ಉಚಿತವಾಗಿ ಕೊಡುತ್ತೇವೆ ಎಂದು, ಘೋಷಣೆ ಮಾಡಿರುವ ಕಾಂಗ್ರೆಸ್ ಸರ್ಕಾರಕ್ಕೆ ವಿದ್ಯುತ್ ಉಚಿತವಾಗಿ ಕೊಡಲು ಸಾಧ್ಯವಾಗುತ್ತಿಲ್ಲ, ಆ ಕಾರಣ ಈ ರೀತಿ ವಿದ್ಯುತ್ ಬೆಲೆ ಏರಿಕೆಯ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದು ಜನವಿರೋಧಿ ಕಾಂಗ್ರೆಸ್ ಸರ್ಕಾರದ ಮೊದಲ ನಡೆಯಾಗಿದೆ. ಇದನ್ನು ಆಮ್ ಆದ್ಮಿ ಪಕ್ಷ ಬಲವಾಗಿ ಖಂಡಿಸುತ್ತದೆ. ಈ ಕೂಡಲೇ ವಿದ್ಯುತ್ ಬೆಲೆ ಏರಿಕೆಯ ಬಿಜೆಪಿ ಸರ್ಕಾರದ ನಿರ್ಧಾರವನ್ನು ಪರಿಷ್ಕರಣೆ ಮಾಡಿ ಬೆಲೆ ಏರಿಕೆಯನ್ನು ಕೂಡಲೇ ರದ್ದು ಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸುತ್ತದೆ.

LEAVE A REPLY

Please enter your comment!
Please enter your name here