Home ಪ್ರಖರ ವಿಶೇಷ ಉಚಿತ ಹೃದಯರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡದ ಕಲ್ಲು ಕಾಯಿಲೆಗಳ ತಪಾಸಣಾ ಶಿಬಿರ

ಉಚಿತ ಹೃದಯರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡದ ಕಲ್ಲು ಕಾಯಿಲೆಗಳ ತಪಾಸಣಾ ಶಿಬಿರ

0
Free checkup camp for heart disease, neuropathy, cancer, kidney stone diseases

ಕಾರಟಗಿ: ಧನ್ವಂತರಿ ಹೆಲ್ತ್ ಸೆಂಟರ್ ಕಾರಟಗಿ, ಬಾಲಾಜಿ ಮೆಡಿಕಲ್ಸ್ ಕಾರಟಗಿ, ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘ (ರಿ) ಶ್ರೀರಾಮನಗರ ತಾ|| ಗಂಗಾವತಿ ಹಾಗೂ ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರುಗಳ ಸಹಯೋಗದಲ್ಲಿ ದಿನಾಂಕ: ೧೭.೦೬.೨೦೨೩ ಶನಿವಾರ ಬೆಳಿಗ್ಗೆ ೧೦:೦೦ ರಿಂದ ಮಧ್ಯಾಹ್ನ ೩:೦೦ ಗಂಟೆಯವರೆಗೆ ಕಾರಟಗಿ ಪಟ್ಟಣದ ನವಲ ರಸ್ತೆಯ ಮುತ್ಯಾಲಪ್ಪ ಕಾಂಪ್ಲೆಕ್ಸ್ನಲ್ಲಿರುವ ಧನ್ವಂತರಿ ಹೆಲ್ತ್ ಸೆಂಟರ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷರಾದ ಜಿ. ರಾಮಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಉಚಿತ ಆರೋಗ್ಯ ಶಿಬಿರದಲ್ಲಿ ನುರಿತ ವೈದ್ಯರಿಂದ ವೈದ್ಯಕೀಯ ಚಿಕಿತ್ಸೆ ಪಡೆಯಬಹುದು ಹಾಗೂ ಗಂಭೀರ ಕಾಯಿಲೆಗಳಾದ ಹೃದಯರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡದ ಕಲ್ಲು ಕಾಯಿಲೆಗಳಿಗೆ ಸಂಬAಧಿಸಿದAತೆ ಚಿಕಿತ್ಸೆ ನೀಡಲಾಗುವುದು, ತಜ್ಞರ ಸಲಹೆ ಮೇರೆಗೆ ಉಚಿತವಾಗಿ ಇ.ಸಿ.ಜಿ/೨ಡಿ ಎಕೋ ಸ್ಕಾö್ಯನಿಂಗ್ ಮಾಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಶಿಬಿರವನ್ನು ಯಶಸ್ವಿಗೊಳಿಸಲು ಜಿ. ರಾಮಕೃಷ್ಣ ಕೋರಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: ೯೪೪೮೨೨೮೭೩೮,


LEAVE A REPLY

Please enter your comment!
Please enter your name here