Blood Donor Day celebrated meaningfully at Holycross Hospital.
ವರದಿ : ಬಂಗಾರಪ್ಪ ಸಿ.
ಹನೂರು : ತಾಲ್ಲೊಕಿನ. ಕಾಮಗೇರಿ ಹೋಲಿಕ್ರಾಸ್ ಆಸ್ಪತ್ರೆ ವತಿಯಿಂದ ಅಂತಾರಾಷ್ಟ್ರೀಯ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜಾಥವನ್ನು ಹಮ್ಮಿಕೊಳ್ಳಲಾಯಿತು,ಬಡವರಿರಲಿ ಶ್ರೀಮಂತರಿರಲಿ ಎಲ್ಲರ ದೇಹದಲ್ಲೂ ಇರುವ ರಕ್ತ ಒಂದೇ ಅಲ್ಲವೇ? ಹೌದು, ಜಗತ್ತಿನೆಲ್ಲೆಡೆ ಪ್ರತಿ ಕ್ಷಣ ಲೆಕ್ಕವಿಲ್ಲದಷ್ಟು ಮಂದಿ ರಕ್ತದ ಅಗತ್ಯದಲ್ಲಿರುತ್ತಾರೆ; ಸಾವಿರಾರು ಮಂದಿ ತಮಗೆ ಬೇಕಾದವರಿಗೆ ಬೇಕಿರುವ ರಕ್ತವನ್ನು ಹುಡುಕಿಕೊಂಡು ಆತಂಕದಿಂದ ಅಲೆಯುತ್ತಿರುತ್ತಾರೆ. ರಕ್ತ ಅಕ್ಷರಶಃ ಜೀವದ್ರವ್ಯ. ಈ ಹಿನ್ನೆಲೆಯಲ್ಲೇ ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಜೂನ್ 14ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸುತ್ತದೆ. ಪ್ರತಿ ವರ್ಷವೂ ಒಂದೊಂದು ಥೀಮ್ ಇಟ್ಟುಕೊಂಡು ಆಚರಿಸಲಾಗುತ್ತದೆ ಎಂದು ಆಸ್ಪತ್ರೆಯ ಮುಖ್ಯಸ್ಥರಾದ ಡಾ ಢಲಿನೊ ತಿಳಿಸಿದರು .
ನಂತರ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ವಿವಿಧ ಗ್ರಾಮದ ದಾನಿಗಳು ಪಾಲ್ಗೊಂಡು ರಕ್ತದಾನ ಮಾಡಿದರು. ಇನ್ನು ಈ ಸಂದರ್ಭದಲ್ಲಿ ಹೋಲಿ ಕ್ರಾಸ್ ಆಸ್ಪತ್ರೆ ಆಡಳಿತ ಅಧಿಕಾರಿ ಡಾ ಡೆಲಿನ್ ಹಾಗೂ ಆಸ್ಪತ್ರೆ ಸಿಬ್ಬಂದಿಗಳು ನೌಕರರು ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.