Home ಪ್ರಖರ ವಿಶೇಷ ಕುಕಡೊಳ್ಳಿ ಗ್ರಾ.ಪಂ ವ್ಯಾಪ್ತಿಯ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರ ವೇತನ ತಾರತಮ್ಯವನ್ನು ಕೂಡಲೇ ಬಗೆಹರಿಸಿ :...

ಕುಕಡೊಳ್ಳಿ ಗ್ರಾ.ಪಂ ವ್ಯಾಪ್ತಿಯ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರ ವೇತನ ತಾರತಮ್ಯವನ್ನು ಕೂಡಲೇ ಬಗೆಹರಿಸಿ : ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಮನವಿ

0
Resolve immediately the wage discrimination of employment guarantee wage workers in Kukadolli Gram Panchayat: Journalist and activist Basavaraju appeals

ಕುಕಡೊಳ್ಳಿ :ಹೌದು ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಕುಕಡೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿಂದ ಉದ್ಯೋಗ ಖಾತ್ರಿ ಯೋಜನೆಯಡಿ ದಿನನಿತ್ಯ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಸ್ಥಳೀಯ ಗ್ರಾಮ ಪಂಚಾಯಿತಿ ಕುಕಡೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 316 ರೂಪಾಯಿ ನೀಡದೇ ಕೇವಲ 220 ರಿಂದ 240 ರೂಪಾಯಿಗಳನ್ನು ಮಾತ್ರ ನೀಡುತ್ತಿದ್ದಾರೆ ಎಂದು ಖಂಡಿಸಿ ಇಂದು ಬೆಳಕ್ಕೆ 11 ಘಂಟೆಯಿಂದ ಸಂಜೆ 4 ಘಂಟೆಯವರೆಗೂ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ವಹಣೆ ಮಾಡುವ ಮಹಿಳಾ ಹಾಗೂ ಪುರುಷ ಕಾರ್ಮಿಕರು ಗ್ರಾಮ ಪಂಚಾಯಿತಿ ಮುಂದೆ ಸಮಾರ್ಪವಾಗಿ ವೇತನ ಕೊಡಿ ಎಂದು ಪಟ್ಟು ಹಿಡಿದರು. ಇನ್ನೂ ಇವರ ಸ್ಥಳಕ್ಕೆ ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಅವರೊಂದಿಗೆ ಮಾತನಾಡಿದ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರು ” ಈ ವೇತನ ಸಮಸ್ಯೆ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮ ಪಂಚಾಯಿತಿಗೆ ನಿಯೋಜನೆ ಗೊಂಡಿರುವ ತಾಂತ್ರಿಕ ಸಹಾಯಕ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲಾ ಹಾಗೂ ನಮ್ಮ ಕೆಲಸ ಮಾಡಿರುವ ಶ್ರಮಕ್ಕೆ ತಕ್ಕಂತೆ ವೇತನ ನೀಡುವುದಕ್ಕೆ ತಾರತಮ್ಯ ಮಾಡಿದ್ದಾರೆ ಎಂದು ಹರಿಯಾಯ್ದಿದ್ದಾರೆ. ಇದೇ ಸಂದರ್ಭದಲ್ಲಿ ಈ ಸಮಸ್ಯೆಯ ಬಗ್ಗೆ ಸಮಗ್ರ ವರದಿ ತಯಾರಿಸಿದ ಪತ್ರಕರ್ತ ಬಸವರಾಜು ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿ.ಇ. ಓ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಗಳ ಗಮನಕ್ಕೆ ತೆಗೆದುಕೊಂಡು ಬಂದು ಬೆಳಕು ಚೆಲ್ಲುವ ಕೆಲಸ ಮಾಡಿದ್ದಾರೆ. ಇನ್ನಾದ್ರೂ ಈ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರ ಸಮಸ್ಯೆ ಶಾಶ್ವತವಾಗಿ ಬಗೆಹರಿಯುವುದೇ ಎಂಬುದನ್ನು ಕಾದುನೋಡಬೇಕಿದೆ *🙏💐


LEAVE A REPLY

Please enter your comment!
Please enter your name here