ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರವು ಬಡವರಿಗೆ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲೇಬೇಕು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ಜಾರಿಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಗೊಂದಲ ಉಂಟುಮಾಡುವ ಪ್ರಯತ್ನ ಮಾಡುತ್ತಿದೆ.
ಜನತೆಗೆ ನೀಡಿದ ಭರವಸೆಯನ್ನು ಉಳಿಸಿಕೊಳ್ಳುವುದು ಕಾಂಗ್ರೆಸ್ ಸರ್ಕಾರದ ಹೊಣೆಗಾರಿಕೆಯಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಜನರಿಗೆ ಈಗ ಪ್ರತಿ ತಿಂಗಳು ಸಿಗುತ್ತಿರುವ 5 ಕೆಜಿ ಅಕ್ಕಿ ಪ್ರಧಾನಿಯವರೇ ನೀಡುತ್ತಿದ್ದಾರೆ. ಅಕ್ಕಿ ಖರೀದಿ ಮಾಡಿಯಾದರೂ ತರಲಿ ಅಥವಾ ಏನಾದರೂ ಮಾಡಲಿ, ಅನ್ನಭಾಗ್ಯ ಯೋಜನೆಯನ್ನು ಅವರು ಜಾರಿಗೊಳಿಸಲೇಬೇಕು ಎಂದು ಒತ್ತಾಯಿಸಿದ್ದಾರೆ.