Home ಕ್ರೈಂ ನ್ಯೂಸ್ ಚಾರ್ಮಾಡಿ ಯುವಕರಿಂದ ಸರಕಾರಿ ಬಸ್ ನಿಲ್ಲಿಸಿ ಗಲಾಟೆ ಪ್ರಕರಣ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಚಾರ್ಮಾಡಿ ಯುವಕರಿಂದ ಸರಕಾರಿ ಬಸ್ ನಿಲ್ಲಿಸಿ ಗಲಾಟೆ ಪ್ರಕರಣ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

0

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಮುಂದೆ ಹೋಗಿ ಎಂದು ಕಂಡೆಕ್ಟರ್ ಮುಂದೆ ತಳ್ಳಿದ ಎಂಬ ಕಾರಣಕ್ಕಾಗಿ ಬಸ್ ನಿಲ್ಲಿಸಿ ದಾಂಧಲೆ ಮಾಡಿದ ಘಟನೆ  ಜೂ 17 ರಂದು ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಂಡಕ್ಟರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಎಸ್ಪಿ ರಿಷ್ಯಂತ್  ಬೆಳ್ತಂಗಡಿಯಲ್ಲಿ ತಿಳಿಸಿದ್ದಾರೆ.


ಮಂಗಳೂರಿನಿಂದ ಮೂಡಿಗೆರೆಗೆ ಸಂಚಾರಿಸುವ ಸರ್ಕಾರಿ ಬಸ್ಸಿಗೆ ಉಜಿರೆಯಲ್ಲಿ ವಿದ್ಯಾರ್ಥಿಗಳು ಹತ್ತಿದ್ದು ಈ ವೇಳೆ ನಿರ್ವಾಹಕ ವಿದ್ಯಾರ್ಥಿಗಳನ್ನು ಬಸ್ ಒಳಗೆ ಮುಂದೆ ಹೋಗಲು ಕೈ ಹಿಡಿದು ಮುಂದೆ ಕಳುಹಿಸುವ ಸಂದರ್ಭ ಬಸ್ ಕಂಡಕ್ಟರ್ ಹಾಗೂ ಕೆಲವು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಅದಲ್ಲದೇ ಈ ವಿಚಾರವನ್ನು ವಿದ್ಯಾರ್ಥಿಗಳು ಚಾರ್ಮಾಡಿಯ  ಯುವಕರಿಗೆ ತಿಳಿಸಿ ಬಸ್ ಅಡ್ಡ ಹಾಕುವಂತೆ ಸೂಚಿಸಿದ್ದಾರೆ.

ಈ ವಿಚಾರವನ್ನು ಬಸ್ಸಿನಲ್ಲಿದ್ದವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ತಿಳಿಸಿದ್ದು ತಕ್ಷಣ ಧರ್ಮಸ್ಥಳ ಠಾಣಾ ಇನ್ಸ್ ಪೆಕ್ಟರ್ ಅನಿಲ್ ಕುಮಾರ್  ಚಾರ್ಮಾಡಿ ಚೆಕ್ ಪೋಸ್ಟ್ ಬಳಿ  ಬಸ್ ನಿಲ್ಲಿಸುವಂತೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ.

ಅದರೆ ಚೆಕ್ ಪೋಸ್ಟ್ ನಲ್ಲಿ ಬಸ್ ತಡೆದು ಹೆಚ್ಚಿನ ಗಲಾಟೆ ಅಗದಂತೆ ನೋಡಿಕೊಂಡಿದ್ದರು.ಈ ವೇಳೆ ಅಲ್ಲಿಗೆ ಆಗಮಿಸಿದ ಯುವಕರ ತಂಡ ಕಂಡೆಕ್ಟರ್ ನಲ್ಲಿ ಗಲಾಟೆ ಮಾಡಿದೆ. ಈ ವೇಳೆ ಕಂಡೆಕ್ಟರ್ ಪರವಾಗಿ ಮಾತನಾಡಿದ ಬಸ್ ಪ್ರಯಾಣಿಕರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದೆ. ಅದಲ್ಲದೇ ವಿಡಿಯೋ ಮಾಡುತಿದ್ದ ವ್ಯಕ್ತಿಯೊಬ್ಬರಿಗೆ ಹಲ್ಲೆಗೈದಿದ್ದು . ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಮೂಡಿಗೆರೆ ಡಿಪೋ ಗೆ ಸೇರಿದ ಸರಕಾರಿ ಬಸ್ ಕಂಡಕ್ಟರ್ ಶಿವಕುಮಾರ್ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದುರ್ವರ್ತನೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಸಂಬಂಧ ಪ್ರಕರಣ ದಾಖಲಾಯಿಸಿದ್ದು. ಅದರಂತೆ ಗಲಾಟೆ ಮಾಡಿದವರ ಮೇಲೆ ಎಫ್ ಐಆರ್ ದಾಖಲಾಗಿದೆ. ಪ್ರಕರಣದ ಬಗ್ಗೆ ಮುಂದಿನ ತನಿಖೆ ನಡೆಸಲಾಗುವುದು ಎಂದು ಬೆಳ್ತಂಗಡಿಯಲ್ಲಿ ದ.ಕ. ಎಸ್ಪಿ ರಿಷ್ಯಂತ್ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here