ಬೆಂಗಳೂರು: ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇಂತಹ ಸಂದರ್ಭದಲ್ಲಿ ನಾಳೆ ಕಾಂಗ್ರೆಸ್ ಪಕ್ಷದಿಂದ ಮೂವರು ಹುರಿಯಾಳುಗಳನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ.
ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಜೂನ್.30ರಂದು ಉಪ ಚುನಾವಣೆ ನಡೆಯಲಿದೆ. ಇಂತಹ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ನಾಳೆ ಮಧ್ಯಾಹ್ನ 3 ಗಂಟೆ ಕೊನೆಯ ದಿನವಾಗಿದೆ.
ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಯಾವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕು ಎನ್ನುವ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ.
ಮತ್ತೊಂದೆಡೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬೋಸರಾಜು ಹಾಗೂ ಬಾಬು ರಾವ್ ಚಂಚನಸೂರ್ ಅವರನ್ನು ಕಣಕ್ಕೆ ಇಳಿಸಲಿದೆ ಎನ್ನಲಾಗುತ್ತಿದೆ.
ಅಂದಹಾಗೇ ಕೇಂದ್ರ ಚುನಾವಣಾ ಆಯೋಗದಿಂದ ವಿಧಾನಸಭಾ ಮೂರು ಸ್ಥಾನಗಳಿಗೆ ಉಪಚುನಾವಣೆ ಸಂಬಂಧ ಅಧಿಸೂಚನೆಯನ್ನು ಹೊರಡಿಸಿತ್ತು. ಶಾಸಕ ಲಕ್ಷ್ಮಣ್ ಸವದಿ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನದ ಅವಧಿ ಜೂನ್.14ಕ್ಕೆ, ಬಾಬು ರಾವ್ ಚಿಂಚನಸೂರ್ ಜೂನ್.17ರಂದು ಹಾಗೂ ಆರ್ ಶಂಕರ್ ಅವರ ಅಧಿಕಾರಾವಧಿ ಜೂನ್.30ರಂದು ಕೊನೆಗೊಳ್ಳಲಿದೆ ಎಂದಿತ್ತು.
ಮೂವರು ಕರ್ನಾಟಕ ವಿಧಾನ ಪರಿಷತ್ ಸದಸ್ಯರ ಅಧಿಕಾರಾವಧಿ ಕೊನೆಗೊಳ್ಳುತ್ತಿರುವ ಹಿನ್ನಲೆಯಲ್ಲಿ ಈ ಮೂರು ಸ್ಥಾನಗಳಿಗೆ ಜೂನ್.30ರಂದು ಉಪ ಚುನಾವಣೆ ನಡೆಸುವುದಾಗಿ ತಿಳಿಸಿತ್ತು.
ಇನ್ನೂ ಜೂನ್.13ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಜೂನ್.20ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಜೂನ್.21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್.23ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್. 30ರಂದು ಮತದಾನವನ್ನು ನಿಗದಿ ಪಡಿಸಲಾಗಿದೆ. ಜೂನ್.30ರಂದು ಬೆಳಿಗ್ಗೆ 9 ರಿಂದ 4 ಗಂಟೆಯವರೆಗೆ ನಡೆಸಲಾಗುತ್ತದೆ. ಸಂಜೆ 5 ಗಂಟೆಗೆ ಮತಗಳ ಏಣಿಕೆ ಕಾರ್ಯ ನಡೆದು, ಫಲಿತಾಂಶ ಅಂದೇ ಘೋಷಣೆಯಾಗಲಿದೆ.