ಅಬುಧಾಬಿಯಿಂದ ಕೊಚ್ಚಿಗೆ ತೆರಳುತ್ತಿದ್ದ ವಿಮಾನದಲ್ಲಿ ಗಲಾಟೆ ಸೃಷ್ಟಿಸಿದ್ದಕ್ಕಾಗಿ ಕೇರಳದ 51 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕೊಚ್ಚಿ: ಅಬುಧಾಬಿಯಿಂದ ಕೊಚ್ಚಿಗೆ ತೆರಳುತ್ತಿದ್ದ ವಿಮಾನದಲ್ಲಿ ಗಲಾಟೆ ಸೃಷ್ಟಿಸಿದ್ದಕ್ಕಾಗಿ ಕೇರಳದ 51 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಏರ್ ಇಂಡಿಯಾ ವಿಮಾನ ಕೊಚ್ಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಳಿಕ ಆರೋಪಿ ಜಿಜಾನ್ ಜಾಕೋಬ್ ನನ್ನು ಬಂಧಿಸಲಾಗಿದೆ. ಏರ್ಲೈನ್ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ ವ್ಯಕ್ತಿಯನ್ನು ಆರೆಸ್ಟ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಆ ವ್ಯಕ್ತಿ ಮದ್ಯದ ಅಮಲಿನಲ್ಲಿದ್ದ ಶಂಕೆ ಇದೆ. ಕ್ಷುಲಕ ಕಾರಣಕ್ಕೆ ಸಹ-ಪ್ರಯಾಣಿಕರು ಮತ್ತು ಸಿಬ್ಬಂದಿಯೊಂದಿಗೆಅವರು ಜಗಳವಾಡಿದ್ದರು ಎಂದು ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದರು. ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಎ) ಅಡಿಯಲ್ಲಿ ಜಾಕೋಬ್ ಬಂಧಿಸಲಾಗಿತ್ತು. ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ನೆಡುಂಬಸ್ಸೆರಿ ಪೊಲೀಸರು ಹೇಳಿದ್ದಾರೆ.