ಬೆಂಗಳೂರು: ಬೆಂಗಳೂರು-ಧಾರವಾಡ ನಡುವೆ ನಾಳೆಯಿಂದಲೇ ಬಹುನಿರೀಕ್ಷಿತ ವಂದೇ ಭಾರತ್ ರೈಲು ಸಂಚಾರ ಪ್ರಾರಂಭಗೊಳ್ಳಲಿದ್ದು, ವಿಡಿಯೋ ಕಾನ್ಫೆರೆನ್ಸ್ ಮೂಲಕ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.
ಆ ಮೂಲಕ ಕರ್ನಾಟಕ್ಕೆ ಮೈಸೂರು-ಚೆನ್ನೈ ಬಳಿಕ ೨ನೇ ವಂದೇ ಭಾರತ್ ರೈಲು ಸೇವೆ ಲಭ್ಯವಾಗಲಿದೆ. ಈ ರೈಲು ಯಶವಂತಪುರ, ದಾವಣಗೆರೆ, ಹುಬ್ಬಳ್ಳಿಯಲ್ಲಿ ನಿಲುಗಡೆಯನ್ನು ಹೊಂದಿದೆ. ಸುಮಾರು ಏಳು ಗಂಟೆಗಳಲ್ಲಿ ಗುರಿ ತಲುಪುತ್ತದೆ.
ಮಂಗಳವಾರ ಹೊರತುಪಡಿಸಿ ವಾರದ ಆರು ದಿನಗಳ ಕಾಲ ಇದು ಪ್ರಯಾಣಿಕರಿಗೆ ಸೇವೆ ಒದಗಿಸಲಿದೆ. ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲು ಸದ್ಯಕ್ಕೆ 530 ಆಸನಗಳನ್ನು ಒಳಗೊಂಡ 8 ಬೋಗಿಗಳನ್ನು ಹೊಂದಿದೆ. ಈ ರೈಲು 489 ಕಿಮಿ ಮಾರ್ಗವನ್ನು ಗಂಟೆಗೆ 110 ಕಿಮಿ ವೇಗದಲ್ಲಿ ಚಲಿಸುತ್ತದೆ.
ಜತೆಗೆ, ಇದು ಕರ್ನಾಟಕದಲ್ಲಿ ಮಾತ್ರ ಓಡಾಲಿರುವ ರಾಜ್ಯಕ್ಕೆ ಲಭಿಸುವ ಮೊದಲ ವಂದೇ ಭಾರತ್ ರೈಲಿ ಕೂಡ ಆಗಲಿದೆ.