Home ಉಡುಪಿ ಉಡುಪಿ: ರಸ್ತೆಯಲ್ಲಿ ಡೀಸೆಲ್ ಚೆಲ್ಲಿ 20 ರಷ್ಟು ದ್ವಿಚಕ್ರ ವಾಹನಗಳು ಸ್ಕಿಡ್

ಉಡುಪಿ: ರಸ್ತೆಯಲ್ಲಿ ಡೀಸೆಲ್ ಚೆಲ್ಲಿ 20 ರಷ್ಟು ದ್ವಿಚಕ್ರ ವಾಹನಗಳು ಸ್ಕಿಡ್

0

ಉಡುಪಿ: ಟ್ರಕ್ ವೊಂದರ ಡೀಸೆಲ್ ರಸ್ತೆಯ ತುಂಬ ಲೀಕ್ ಆದ ಕಾರಣ ,ಹಲವು ದ್ವಿಚಕ್ರ ವಾಹನಗಳು ಸ್ಕಿಡ್ ಆದ ಘಟನೆ ಉಡುಪಿ ನಗರದ ಸಿಟಿ ಬಸ್ ತಂಗುದಾಣದ ಬಳಿ ಬುಧವಾರ ರಾತ್ರಿ ಸಂಭವಿಸಿದೆ. ಕಲ್ಸಂಕದಿಂದ ಉಡುಪಿಯತ್ತ ತೆರಳುತ್ತಿದ್ದ ಟ್ರಕ್ ವೊಂದರಿಂದ ಡೀಸೆಲ್ ಚೆಲ್ಲಲ್ಪಟ್ಟಿದೆ. ಈ ವೇಳೆ ಉಡುಪಿಯತ್ತ ತೆರಳುತ್ತಿದ್ದ ಸುಮಾರು 15ರಿಂದ 20 ರಷ್ಟು ದ್ವಿಚಕ್ರ ವಾಹನಗಳು ಸ್ಕಿಡ್ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಟ್ರಾಫಿಕ್ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು,ಅವರು ಸ್ಥಳಕ್ಕೆ ಆಗಮಿಸಿದರು. ಉಡುಪಿ ಜಿಲ್ಲಾ ಅಗ್ನಿಶಾಮಕ ದಳದ ಸಿಬ್ಬಂದಿ ಗಳ ಸಹಕಾರದಲ್ಲಿ ಬ್ಲೀಚಿಂಗ್ ಪೌಡರ್ ಬಳಿದು ನೀರು ಹಾಕಿ ಕ್ಲೀನ್ ಮಾಡಿದ ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಈ ವೇಳೆ ಕೆಲ ಕಾಲ ವಾಹನ ದಟ್ಟಣೆ ಉಂಟಾಯಿತು.

LEAVE A REPLY

Please enter your comment!
Please enter your name here