Home ತಾಜಾ ಸುದ್ದಿ  ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು

 ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು

0

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಅಜಿತ್ ರೈ ಅಮಾನತು ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.


ಜೂನ್ 28 ರಂದು ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ದಾಳಿ ವೇಳೆ ಅಕ್ರಮ ಆಸ್ತಿ, ಲಕ್ಷಾಂತರ ರೂ ಹಣ ಪತ್ತೆಯಾಗಿತ್ತು.

ನಗರದ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 40 ಲಕ್ಷಕ್ಕೂ ಹೆಚ್ಚು ನಗದು ಸೇರಿದಂತೆ ವಿವಿಧ ಅಕ್ರಮ ಆಸ್ತಿಗಳನ್ನು ಪತ್ತೆ ಹಚ್ಚಿದ್ದರು. ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಸಿಕ್ಕಿದ್ದವು , ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು, ಅಲ್ಲದೇ ಆಪ್ತರ ಮನೆಯಲ್ಲಿ ನಾಲ್ಕು ಫಾರ್ಚೂನರ್ ಕಾರುಗಳು ಪತ್ತೆಯಾಗಿತ್ತು . ಅಜಿತ್ ಆಸ್ತಿಪತ್ರಗಳನ್ನು ಕಂಡು ಅಧಿಕಾರಿಗಳೇ ದಂಗಾಗಿದ್ದರು.

ಬಳಿಕ ತಹಶೀಲ್ದಾರ್ ‘ಅಜಿತ್ ರೈ’ ಬಂಧಿಸಿದ್ದ ಪೊಲೀಸರು ನಂತರ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಅಜಿತ್ ರೈಯನ್ನು ಜುಲೈ 6 ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.

LEAVE A REPLY

Please enter your comment!
Please enter your name here