ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾಗತಿಗೆ ಸೂಚಿಸಿದ ಗಡುವು ಮುಗಿದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನ ಅಬ್ದುಲ್ ನಾಸಿರ್, ಅಬ್ದುಲ್ ರೆಹಮಾನ್ ಮತ್ತು ಬೆಳ್ತಂಗಡಿಯ ನೌಷಾದ್ ಹಾಗೂ ಮತ್ತೆ ಐವರು ಸೇರಿ ಒಟ್ಟು 8 ಮಂದಿ ಶಂಕಿತ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಇನ್ನು ತುಫೈಲ್, ಮೊಹಮ್ಮದ್ ಮುಸ್ತಾಫ ಸುಳಿವಿಗೆ ತಲಾ 5 ಲಕ್ಷ ರೂ. ಹಾಗೂ ಉಮ್ಮರ್ ಫಾರೂಕ್, ಅಬೂಬಕ್ಕರ್ ಸಿದ್ದಿಕ್ ಸುಳಿವು ನೀಡಿದಲ್ಲಿ ತಲಾ 2 ಲಕ್ಷ ರೂ. ಬಹುಮಾನವನ್ನು ಘೋಷಿಸಲಾಗಿದೆ.
ಜೂ.30ರೊಳಗೆ ತಲೆಮರೆಸಿಕೊಂಡಿರುವ ಆರೋಪಿಗಳು ಶರಣಾಗಬೇಕು, ಇಲ್ಲವೇ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಸೂಚನೆ ನೀಡಲಾಗಿತ್ತು. ಅದರೊಂದಿಗೆ ಧ್ವನಿವರ್ಧಕದ ಮೂಲಕ ಉದ್ಘೋಷಣೆ ಮಾಡಿ, ಆರೋಪಿಗಳ ಮನೆಗಳಲ್ಲೂ ಭಿತ್ತಿಪತ್ರ ಹಚ್ಚುವ ಮೂಲಕ ಮಾಹಿತಿ ನೀಡಲಾಗಿತ್ತು. ಆದರೆ ಆರೋಪಿಗಳು ಶರಣಾಗಿಲ್ಲ ಎಂದು ತಿಳಿದುಬಂದಿದೆ.