Home ತಾಜಾ ಸುದ್ದಿ  ‘ವಿದ್ಯುತ್ ಬಿಲ್‌’ನ ಹಿಂಬಾಕಿ ಇದ್ದರೂ ದೊರಕಲಿದೆ ‘ಗೃಹಜ್ಯೋತಿ ಯೋಜನೆ’ಯ ಪ್ರಯೋಜನ

 ‘ವಿದ್ಯುತ್ ಬಿಲ್‌’ನ ಹಿಂಬಾಕಿ ಇದ್ದರೂ ದೊರಕಲಿದೆ ‘ಗೃಹಜ್ಯೋತಿ ಯೋಜನೆ’ಯ ಪ್ರಯೋಜನ

0

ಬೆಂಗಳೂರು: ರಾಜ್ಯದ ವಿದ್ಯುತ್ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಎನ್ನುವಂತೆ ಗೃಹ ಜ್ಯೋತಿ ಯೋಜನೆಯಡಿ ( Gruha Jyoti Scheme ) ಹಿಂಬಾಕಿ ಇದ್ದರೂ ದೊರಕಲಿದೆ ಯೋಜನೆಯ ಪ್ರಯೋಜನ ದೊರೆಯಲಿದೆ ಎಂಬುದಾಗಿ ಇಂಧನ ಇಲಾಖೆ ಮಾಹಿತಿ ನೀಡಿದೆ.


ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಇಂಧನ ಇಲಾಖೆಯೂ, ಗೃಹ ಜ್ಯೋತಿ ಯೋಜನೆಯ ಸೌಲಭ್ಯ ಪಡೆಯಲು ಹಿಂಬಾಗಿ ಪಾವತಿಸುವುದು ಕಡ್ಡಾಯಗೊಳಿಸಲಾಗಿತ್ತು.

ಮೂರು ತಿಂಗಳ ಕಾಲಾವಕಾಶ ಇರುವ ಕಾರಣ ಅದರೊಳಗೆ ಹಿಂಬಾಕಿ ಪಾವತಿಸಿದ್ರೇ, ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ವಿದ್ಯುತ್ ಉಚಿತ ಸೌಲಭ್ಯದ ಪ್ರಯೋಜನ ಪಡೆಯಬಹುದಾಗಿದೆ ಎಂದು ಹೇಳಿದೆ.

ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಅವರಿಗೆ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ. ಹಿಂಬಾಕಿಯನ್ನು ಸೆ.30 ರೊಳಗೆ ಪಾವತಿಸಬೇಕು. ಮೂರು ತಿಂಗಳು ಕಾಲಾವಕಾಶ ಇದೆ ಎಂದು ಹೇಳಿದೆ.

ನೀವು ಜುಲೈ 25 ರೊಳಗೆ ಯೋಜನೆಗೆ ನೋಂದಾಯಿಸಿಕೊಂಡಲ್ಲಿ, ಆಗಸ್ಟ್ ತಿಂಗಳ ಬಿಲ್’ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ. ಹಾಗೆಯೇ, ಜುಲೈ 25 ರಿಂದ
ಆಗಸ್ಟ್ 25 ರೊಳಗೆ ನೋಂದಾಯಿಸಿಕೊಂಡಲ್ಲಿ, ಸೆಪ್ಟೆಂಬರ್ ತಿಂಗಳ ಬಿಲ್’ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ. ಬಿಲ್ಲಿಂಗ್ ಅವಧಿ ಪ್ರತಿ ತಿಂಗಳ 25 ನೇ
ತಾರೀಖಿನಿಂದ ಮುಂದಿನ ತಿಂಗಳ 25 ತಾರೀಖಿನವರೆಗೆ ಎಂದು ಹೇಳಿದೆ.

ಈ ಪ್ರಯೋಜನ ಪಡೆಯಲು ನಿಮ್ಮ ವಿದ್ಯುತ್ ಬಳಕೆಯ ಸರಾಸರಿ 200 ಯೂನಿಟ್ ಮೀರಿರಬಾರದು. ಗೃಹ ಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25 ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್’ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ ಯೋಜನೆಯ ಪ್ರಯೋಜನವನ್ನು ಅವರು ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಲಿದ್ದಾರೆ ಎಂದು ತಿಳಿಸಿದೆ.

ಗೃಹ ಜ್ಯೋತಿ ಯೋಜನೆಯ ನೋಂದಣಿಗೆ ವಿಳಂಬ ಬೇಡ. ಪ್ರಯೋಜನ ಪಡೆಯಲು ಇಂದೇ https://sevasindhugs.karnataka.gov.in/ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಿ ಎಂದು ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here