ಬೆಂಗಳೂರು: ರಾಜ್ಯದ ಕುಟುಂಬದ ಯಜಮಾನಿ ಮಹಿಳೆಯರು ಕಾಯುತ್ತಿರುವಂತ ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ, 2000 ಹಣ ಪಡೆಯಲು ಅರ್ಜಿ ಸಲ್ಲಿಕೆ ಜುಲೈ14ರಿಂದ ಆರಂಭಗೊಳ್ಳಲಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಯಜಮಾನಿ ಮಹಿಳೆಯರು ಕಾಯುತ್ತಿರುವಂತ ಮಹತ್ವದ ನಮ್ಮ ಸರ್ಕಾರ ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿ ಆಗಸ್ಟ್ ತಿಂಗಳಿನಿಂದಲೇ ಕುಟುಂಬದ ಯಜಮಾನಿ ಗೃಹ ಲಕ್ಷ್ಮೀಯರ ಖಾತೆಗೆ 2000 ಹಣ ಹಾಕಲಾಗುತ್ತದೆ ಎಂದರು.
ಈ ತಿಂಗಳಿನಿಂದ ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆಯ ಲಾಭ ರಾಜ್ಯದ ಜನರಿಗೆ ಸಿಗಲಿದೆ. ಮುಂದಿನ ಆಗಸ್ಟ್ ನಿಂದ ಗೃಹ ಲಕ್ಷ್ಮೀ ಯೋಜನೆಯಡಿ ಮನೆಯ ಕುಟುಂಬದ ಯಜಮಾನಿ ಮಹಿಳೆಯರಿಗೆ ಸಿಗಲಿದೆ ಎಂದು ತಿಳಿಸಿದರು. ನಾವು ಘೋಷಿಸಿರುವಂತ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ. ಅದರಲ್ಲಿ ಯಾವುದೇ ಡೌಟ್ ಇಲ್ಲ ಎಂದರು.
ಗೃಹ ಲಕ್ಷ್ಮೀ ಯೋಜನೆಗೆ ಸರ್ಕಾರದಿಂದ ಪ್ರತ್ಯೇಕ ಆಯಪ್ ಬಿಡುಗಡೆ ಮಾಡಲಾಗುತ್ತದೆ. ಅದರಂತೆ ಸರ್ವರ್ ಸಮಸ್ಯೆಗೆ ಕಡಿವಾಣ ಹಾಕಲು ಸರ್ಕಾರವೇ ಪ್ರತ್ಯೇಕ ಆಯಪ್ ಸಿದ್ಧಪಡಿಸಿದ್ದು, ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು. ಗೂಗಲ್ ಪ್ಲೇ ಸ್ಟೋರ್, ಆಯಪಲ್ ಸ್ಟೋರ್ನಲ್ಲಿ ಈ ಆಯಪ್ ಲಭ್ಯವಾಗಲಿದೆ. ಇನ್ನೂ ಸೇವಾಸಿಂಧು ವೆಬ್ಸೈಟ್ನಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಆಗಸ್ಟ್ 16 ರಿಂದ ಮನೆ ಒಡತಿಯರ ಖಾತೆಗೆ 2 ಸಾವಿರ ಹಣ ಜಮಾವಾಗಲಿದೆ ಅಂತ ಹೇಳಿದ್ದಾರೆ. ಇದೇ ವೇಳೆ ಅವರು ರಾಜ್ಯ ಸರ್ಕಾರದ ಈ ಚಾಲನೆ ಆ. 16 ರಂದು ಸಿಗಲಿದೆ ಅಂತ ತಿಳಿಸಿದರು. ನಮ್ಮ ಸರ್ಕಾರದ ಎಲ್ಲಾ ಗ್ಯಾರಂಟಿಗಳನ್ನು ಹಂತವಾಗಿ ಜಾರಿಗೆ ತರಲಿದ್ದೇತ ಹೇಳಿದ ಅವರು, ನಾವು ನುಡಿದಂತೆ ನಡೆದ ಸರ್ಕಾರವಾಗಿದೆ ಎಂದು ತಿಳಿಸಿದರು.