Home ಕರಾವಳಿ ಉಳ್ಳಾಲ: ಬಾಡಿಗೆ ಮನೆಯಲ್ಲಿ ಯುವತಿ ನೇಣು ಬಿಗಿದು ಆತ್ಮಹತ್ಯೆ ; ಪ್ರೇಮ ವೈಫಲ್ಯ ಶಂಕೆ 

ಉಳ್ಳಾಲ: ಬಾಡಿಗೆ ಮನೆಯಲ್ಲಿ ಯುವತಿ ನೇಣು ಬಿಗಿದು ಆತ್ಮಹತ್ಯೆ ; ಪ್ರೇಮ ವೈಫಲ್ಯ ಶಂಕೆ 

0

ಉಳ್ಳಾಲ: ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ. 


ಪ್ರೀತಿಕಾ ಪೂಜಾರಿ(21) ಆತ್ಮ ಹತ್ಯೆಗೈದ ಯುವತಿ. ಪ್ರೀತಿಕಾ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಉದ್ಯೋಗ ಮಾಡುತ್ತಿದ್ದರು. ಇಂದು ಮಧ್ಯಾಹ್ನ 12.30 ರ ವೇಳೆಗೆ ಪ್ರೀತಿಕಾ ಮನೆಯಲ್ಲಿ ಆತ್ಮಹತ್ಯೆಗೈದಿರುವ ವಿಚಾರ ಬೆಳಕಿಗೆ ಬಂದಿದೆ. ಮಧ್ಯಾಹ್ನ ಕೆಲಸದಿಂದ ಮರಳಿದ್ದ ಪ್ರೀತಿಕಾ ನೇಣಿಗೆ ಕೊರಳೊಡ್ಡಿದ್ದಾರೆ.

ಕೊಣಾಜೆ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿದ್ದಾರೆ. ಮೃತ ಪ್ರೀತಿಕಾ ಯುವಕನೊಬ್ಬನನ್ನ ಪ್ರೀತಿಸುತ್ತಿದ್ದು ಆತ ಪ್ರೇಮ ನಿರಾಕರಣೆ ಮಾಡಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here