Home ಕರಾವಳಿ ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿತ- ತಾಯಿ ಮೃತ್ಯು, ಮಗಳ ರಕ್ಷಣೆ

ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿತ- ತಾಯಿ ಮೃತ್ಯು, ಮಗಳ ರಕ್ಷಣೆ

0

ಬಂಟ್ವಾಳ: ಇಂದು ಮಂಜಾನೆ ನಡೆದ ಘಟನೆಯೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಗುಡ್ಡ ಕುಸಿದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಇಬ್ಬರು ಸಿಲುಕಿಕೊಂಡಿ, ಓರ್ವ ಮಹಿಳೆಯ ರಕ್ಷಣೆ ಮಾಡಿದರೂ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ.


ಝರೀನಾ (49) ಮೃತಪಟ್ಟವರು.  ಸಫಾ ಅವರನ್ನು ರಕ್ಷಿಸಲಾಗಿದೆ.

ಸ್ಥಳಕ್ಕೆ ಎನ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸುರಿಯುವ ಮಳೆಯಲ್ಲೂ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಬೆಳಗ್ಗೆ 6 ಗಂಟೆಗೆ ಈ ಘಟನೆ ನಡೆದಿದೆ. ಸ್ಥಳದಲ್ಲಿ ಅಗ್ನಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗಳು ತಹಶಿಲ್ದಾರ್ ಎಸ್.ಬಿ.ಕೂಡಲಗಿ ಮತ್ತು ಕಂದಾಯ ಇಲಾಖೆ ಸಿಬಂದಿ , ಸ್ಥಳೀಯರ ನೆರವಿನಲ್ಲಿ ರಕ್ಷಣಾ ಕಾರ್ಯ ನಡೆದಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ಗುಂಪುಮನೆ ಎಂಬಲ್ಲಿ ವಾಸ್ತವಿರುವ ಮಹಮ್ಮದ್ ಎಂಬುವರ ಮನೆಗೆ ಗುಡ್ಡ ಜರಿದು ಮನೆಯಲ್ಲಿ ವಾಸ್ತವ್ಯವಿದ್ದ ಮಹಮ್ಮದ್ ರವರ ಪತ್ನಿ 49 ವರ್ಷ ಪ್ರಾಯದ ಝರಿನ ಹಾಗೂ ಮಗಳಾದ 20 ವರ್ಷ ಪ್ರಾಯದ ಸಫಾ ಎಂಬುವರು ಮನೆಯೊಳಗೆ ಸಿಕ್ಕಿಕೊಂಡಿದ್ದರು. ಅದರಲ್ಲಿ ಸಫಾರವರನ್ನು ಕೂಡಲೇ ರಕ್ಷಣೆ ಮಾಡಲಾಗಿದೆ. ಝರೀನಾ ಅವರು ಮೃತಪಟ್ಟಿದ್ದಾರೆ ಎಂದು ಬಂಟ್ವಾಳ ತಹಸೀಲ್ದಾರ್ ಎಸ್.ಬಿ.ಕೂಡಲಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here