ಪುತ್ತೂರು; ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ವೈಧ್ಯರನ್ನು ನೇಮಕ ಮಾಡುವಂತೆ ಆಗ್ರಹಿಸಿ ವಿಧಾನಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರಐಯವರು ವಿಷಯ ಪ್ರಸ್ತಾಪಿಸಿದ್ದು ಸರಕಾರಿ ಆಸ್ಪತ್ರೆಯ ಸಮಸ್ಯೆಯಗಳ ಬಗ್ಗೆ ಸರಕಾರದ ಗಮನ ಸೆಳೆದಿದ್ದಾರೆ.
ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಅಗತ್ಯವಾಗಿ ಬೇಕಾಗಿದ್ದು , ಆಸ್ಪತ್ರೆಯಲ್ಲಿ ಒಬ್ಬರು ಪ್ರಸೂತಿ ತಜ್ಞರಿದ್ದು ಅವರು ಹೆಸರಿಗೆ ರಜೆ ಮೆಲೆ ತೆರಳಿದ ಕಾರಣ ಹೆರಿಗೆ ಮಾಡಿಸಲು ವೈಧ್ಯರಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿರುತ್ತದೆ. ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿರುವ ಏಕೈಕ ದೊಡ್ಡ ಸರಕಾರಿ ಆಸ್ಪತ್ರೆಯಗಿರುವ ಕಾರಣ ಸರಕಾರಿ ಆಸ್ಪತ್ರೆಗೆ ಹೆರಿಗೆಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದು ವೈದ್ಯರಿಲ್ಲದ ಕಾರಣ ಸಮಸ್ಯೆ ಉಂಟಾಗಿದೆ. ಸರಕಾರ ತಕ್ಷಣವೇ ನೇಮಕ ವೈದ್ಯರನ್ನು ನೇಮಕ ಮಾಡುವ ಮೂಲಕ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ. ಅದಿವೇಶನ ಶೂನ್ಯ ವೇಳೆಯಲ್ಲಿ ಶಾಸಕರು ಈ ಪ್ರಸ್ತಾಪವನ್ನು ಮಾಡಿದ್ದರು.
Home ಕರಾವಳಿ ಪುತ್ತೂರು ಸರಕಾರಿ ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ತಜ್ಞರ ನೇಮಕ-ವಿಧಾನಸಭಾ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ...