Home ತಾಜಾ ಸುದ್ದಿ ಮಹಿಳೆಯರಿಗೆ ‘ಉದ್ಯಮ ಶಕ್ತಿ’: ಸ್ವಸಹಾಯ ಸಂಘದ ಮೂಲಕ 100 ಪೆಟ್ರೋಲ್ ಬಂಕ್

ಮಹಿಳೆಯರಿಗೆ ‘ಉದ್ಯಮ ಶಕ್ತಿ’: ಸ್ವಸಹಾಯ ಸಂಘದ ಮೂಲಕ 100 ಪೆಟ್ರೋಲ್ ಬಂಕ್

0

ಬೆಂಗಳೂರು: ರಾಜ್ಯ ಸರ್ಕಾರವು ‘ಉದ್ಯಮ ಶಕ್ತಿ’ ಎಂಬ ಯೋಜನೆಯಡಿ 100 ಸ್ಥಳಗಳಲ್ಲಿ ಪೆಟ್ರೋಲ್‌ ಬಂಕ್‌ಗಳನ್ನು ಸ್ಥಾಪಿಸಲಾಗುವುದು. ಅವುಗಳನ್ನು ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಈ ವಿಚಾರ ಪ್ರಕಟಿಸಿರುವ ಅವರು, ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದೊಂದಿಗೆ ಈ ಯೋಜನೆ ರೂಪಿಸಲಾಗುವುದು ಎಂದಿದ್ದಾರೆ. ಪೆಟ್ರೋಲ್‌ ಬಂಕ್‌ಗಳ ಸ್ಥಾಪನೆಗೆ ಪೆಟ್ರೋಲಿಯಂ ಕಂಪನಿಗಳು ಬಂಡವಾಳ ಹೂಡಲಿವೆ. ರಾಜ್ಯ ಸರ್ಕಾರವು ಪೆಟ್ರೋಲ್ ಬಂಕ್‌ ಸ್ಥಾಪನೆಗೆ ಭೂಮಿ ಒದಗಿಸುವುದರೊಂದಿಗೆ ತರಬೇತಿ, ಪರವಾನಗಿ, ಮತ್ತಿತರ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here