ಬೆಂಗಳೂರು : ವಿಧಾನಸೌಧ ಪ್ರವೇಶಿಸಲು ಆಗಮಿಸಿದ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದ್ದು, ಸಿಬ್ಬಂದಿಗಳು ಮಹಿಳೆಯನ್ನು ವಾಪಸ್ ಕಳುಹಿಸಿದ್ದಾರೆ.
ಇತ್ತೀಚೆಗಷ್ಟೇ ಸದನದಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಶಾಸಕರ ಆಸನದಲ್ಲಿ 15 ನಿಮಿಷ ಕುಳಿತು ಹೋಗಿದ್ದನು. ಈ ಬೆನ್ನಲ್ಲೇ ವಿಧಾನಸೌಧದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.
ಇಂದು ತಪಾಸಣೆ ನಡೆಸುವಾಗ ಮಹಿಳೆಯೊಬ್ಬರ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದ್ದು, ಮಹಿಳೆಯನ್ನು ವಾಪಸ್ ಕಳುಹಿಸಲಾಗಿದೆ. ವಿಧಾನಸೌಧದ ಪೂರ್ವ ಗೇಟ್ ನಲ್ಲಿ ಮಹಿಳೆಯ ಬ್ಯಾಗ್ ಸ್ಕ್ಯಾನಿಂಗ್ ಮಾಡುವ ವೇಳೆ ಚಾಕು ಪತ್ತೆಯಾಗಿದೆ.
ಸದನಕ್ಕೆ ‘ಅನಾಮಿಕ ವ್ಯಕ್ತಿ’ ಎಂಟ್ರಿ ಬೆನ್ನಲ್ಲೇ ವಿಧಾನಸೌಧದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಇತ್ತೀಚೆಗೆ ಬಜೆಟ್ ಮಂಡನೆ ವೇಳೆ ಭದ್ರತಾ ಲೋಪ ನಡೆದಿದ್ದು, ವಿಧಾನಸೌಧಕ್ಕೆ ಅನಾಮಿಕ ವ್ಯಕ್ತಿಯೊಬ್ಬ ಪ್ರವೇಶಿಸಿ ಸುಮಾರು 15 ನಿಮಿಷ ಕುಳಿತ ಘಟನೆ ವರದಿಯಾಗಿತ್ತು.ಈ ಬೆನ್ನಲ್ಲೇ ವಿಧಾನಸೌಧದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಐಡಿ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಸರಿಯಾದ ದಾಖಲಾತಿ ಹೊಂದಿದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕೊಡಲು ಪೋಲೀಸರು ಮುಂದಾಗಿದ್ದಾರೆ.