Home ಕರಾವಳಿ ಮಂಗಳೂರು: ಖ್ಯಾತ ವಕೀಲರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

ಮಂಗಳೂರು: ಖ್ಯಾತ ವಕೀಲರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

0

ಮಂಗಳೂರು: ಮಂಗಳೂರು ನಗರದಲ್ಲಿ ಖ್ಯಾತ ನ್ಯಾಯವಾದಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಗರದ ವಕೀಲ ಬಿ. ಹರೀಶ್‌ ಆಚಾರ್ಯ ಅವರ ಮೃತದೇಹ ಭಾಗಶಃ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ನಗರ ಬಿಜೈ ಬಾರೆಬೈಲ್‌ ನ ಅವರ ಮನೆಯಲ್ಲಿ ಪತ್ತೆಯಾಗಿದೆ. ಅವರ ಸಂಬಂಧಿಗಳಿದ್ದಲ್ಲಿ (0824-2220822) ಸಂಪರ್ಕ ಸಂಖ್ಯೆಗೆ ಕರೆ ಮಾಡುವಂತೆ ಪೊಲೀಸರು ಕೋರಿದ್ದಾರೆ. ಹರೀಶ್‌ ಆಚಾರ್ಯ ಅವರು ಶುಕ್ರವಾರ ನ್ಯಾಯಾಲಯ ಕಲಾಪಕ್ಕೆ ಹಾಜರಾಗಿದ್ದರು. ಜು.9ರಿಂದ ಜು.11ರ ನಡುವೆ ಮನೆಯಲ್ಲಿರುವ ವೇಳೆ ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ವೆನ್ಲಾಕ್‌ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ.


LEAVE A REPLY

Please enter your comment!
Please enter your name here