ಬೆಂಗಳೂರು : ಪ್ರೀತಿ ಮಾಡಿದ್ದಕ್ಕೆ ಕಾಲೇಜು ವಿಧ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆರ್ಆರ್ ನಗರದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಪುತ್ರನಾದ ಮನು, ತನ್ನ ಸಂಬಂಧಿಕರ ಯುವತಿಯನ್ನು ಪ್ರೀತಿಸುತಿದ್ದ. ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಕಳೆದ ಜುಲೈ 3 ರಂದು ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ ಯುವತಿಯನ್ನು ಮನೆಗೆ ಕರೆದೊಯ್ದಿದ್ದ. ಈ ವೇಳೆ ಯುವತಿಯ ಪೋಷಕರು ಮನು ಮನೆಗೆ ನುಗ್ಗಿ ಹಲ್ಲೆ ನಡೆಸಿ ಯುವತಿಯನ್ನು ಕರೆದೊಯ್ದುದಿದ್ದರು.
ಇದಾದ ಬಳಿಕ ಮನು ಎಂದಿನಂತೆ ಕಾಲೇಜಿಗೆ ತೆರಳಿದ್ದು, ಆತನ ತಂದೆ ತಂದೆ ರಂಗನಾಥ ನಿನ್ನೆ ಬೆಳಗ್ಗೆ ಡ್ರಾಪ್ ಮಾಡಿದ್ದರು. ಬಳಿಕ ವಾಪಾಸ್ಸಾಗುವ ವೇಳೆ ಬಸ್ ನಿಲ್ದಾಣದಲ್ಲಿ ಬಸ್ಗೆ ಕಾಯುತಿದ್ದ ಮನುವನ್ನು ಕಿಡ್ನಾಪ್ ಮಾಡಿದ ದುಷ್ಕರ್ಮಿಗಳು. ಯುವಕನ ಕೈ ಕಾಲು ಕಟ್ಟಿಹಾಕಿ ಬೆಂಕಿ ಇಟ್ಟಿದ್ದಾರೆ. ಸದ್ಯ ಕುಂಬಳಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಾಳು ವಿದ್ಯಾರ್ಥಿ ಮನುಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳ ವಿರುದ್ದ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.