Home ತಾಜಾ ಸುದ್ದಿ ಮಂಗಳೂರು: ಪರೀಕ್ಷೆಯಲ್ಲಿ ನಕಲು ಮಾಡುವಾಗ ಮೇಲ್ವಿಚಾರಕರಿಗೆ ಸಿಕ್ಕಿಬಿದ್ದ ವಿದ್ಯಾರ್ಥಿ : 9ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ...

ಮಂಗಳೂರು: ಪರೀಕ್ಷೆಯಲ್ಲಿ ನಕಲು ಮಾಡುವಾಗ ಮೇಲ್ವಿಚಾರಕರಿಗೆ ಸಿಕ್ಕಿಬಿದ್ದ ವಿದ್ಯಾರ್ಥಿ : 9ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

0

ಬೆಂಗಳೂರು: ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿ ಬಿದ್ದು ಬಳಿಕ ಕಾಲೇಜಿನ 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಿರಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


ಗಿರಿನಗರ ನಿವಾಸಿ ಆದಿತ್ಯ ಪ್ರಭು (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಮಂಗಳೂರು ಮೂಲದ ಆದಿತ್ಯ ಪ್ರಭು ಪೋಷಕರ ಜತೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಬ್ರಿಗೇಡ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದು, ಹೊಸಕೆರೆ ಹಳ್ಳಿ ಸಮೀಪದ ಪ್ರತಿಷ್ಠಿತ ಕಾಲೇಜಿನಲ್ಲಿ ಬಿಟೆಕ್‌ನ ದ್ವಿತೀಯ ಸೆಮಿಸ್ಟರ್‌ ವ್ಯಾಸಂಗ ಮಾಡುತ್ತಿದ್ದ. ಇನ್ನು ಸೋಮವಾರ ಪರೀಕ್ಷೆಯಿದ್ದು, ಈ ವೇಳೆ ಮೊಬೈಲ್‌ ಮೂಲಕ ನಕಲು ಮಾಡುತ್ತಿದ್ದ. ಅದನ್ನು ಗಮನಿಸಿದ ಶಿಕ್ಷಕರು, ಆತನನ್ನು ಕೊಠಡಿಯಿಂದ ಹೊರಗೆ ಕರೆತಂದು ಕಾಲೇಜು ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ.

ಆಡಳಿತ ಮಂಡಳಿ ತಕ್ಷಣ ಆತನ ಪೋಷಕರಿಗೆ ಕಾಲೇಜಿಗೆ ಬರುವಂತೆ ತಿಳಿಸಿದ್ದು, ಅದರಿಂದ ಬೇಸರಗೊಂಡು 9ನೇ ಮಹಡಿಗೆ ಹೋಗಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here