Home ತಾಜಾ ಸುದ್ದಿ ಗೃಹಲಕ್ಷ್ಮೀ ಯೋಜನೆಗೆ ನಾಳೆ ಚಾಲನೆ- ಇಂದು ಸರ್ಕಾರ ಹೊರಡಿಸಿದ ಸುತ್ತೋಲೆಯ ಬಗ್ಗೆ ತಿಳಿಯಿರಿ

ಗೃಹಲಕ್ಷ್ಮೀ ಯೋಜನೆಗೆ ನಾಳೆ ಚಾಲನೆ- ಇಂದು ಸರ್ಕಾರ ಹೊರಡಿಸಿದ ಸುತ್ತೋಲೆಯ ಬಗ್ಗೆ ತಿಳಿಯಿರಿ

0

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ನೀಡಿರುವ 5 ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ ಯೋಜನೆ’ಗೆ ಜುಲೈ 19ರಂದು ಬುಧವಾರ ಚಾಲನೆ ಸಿಗಲಿದೆ‌.ಯೋಜನೆಯ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗದೇ ಉಚಿತವಾಗಿ ನೋಂದಣಿ ಮಾಡಿಕೊಳ್ಳಿರಿ ಎಂದು ಸರ್ಕಾರ ಕರೆ ನೀಡಿದೆ.


ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ಸಲುವಾಗಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ.ಗಳನ್ನು ನೀಡುವುದು ಗೃಹಲಕ್ಷ್ಮಿ ಯೋಜನೆಯಾಗಿದೆ. ದಿನಾಂಕ 6/6/2023ರಂದು ಸರ್ಕಾರದ ಆದೇಶದಂತೆ ಯೋಜನೆ ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ‘ಗೃಹಲಕ್ಷ್ಮಿ’ ಯೋಜನೆಯ ಜಾರಿ ಕುರಿತು ದಿನಾಂಕ 15/7/2023ರಂದು ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಸೂಚನೆಗಳನ್ನು ನೀಡಿದ್ದಾರೆ. ಯೋಜನೆ ಜಾರಿಗಾಗಿ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಗೃಹಲಕ್ಷ್ಮಿ ಯೋಜನೆ ಸೂಚನೆಗಳು 

* ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ನೋಂದಣಿಗೆ ಗುರುತಿಸಲ್ಪಟ್ಟಿರುವ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್/ ಬಾಪೂಜಿ ಸೇವಾ ಕೇಂದ್ರ/ ನಗರ ಸ್ಥಳೀಯ ಆಡಳಿತ ಸರ್ಕಾರಿ ಅಧಿಕಾರಿ/ ಕಛೇರಿಯ ಕೇಂದ್ರಗಳಲ್ಲಿ ಮೇಲ್ವಿಚಾರಣೆಯನ್ನು ನಿರ್ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸುವುದು.

* ಸದರಿ ಕೇಂದ್ರಗಳಲ್ಲಿ ಜನದಟ್ಟಣೆಯನ್ನು ನಿಯಂತ್ರಿಸಲು ಓರ್ವ ಪೊಲೀಸ್‌ ಸಿಬ್ಬಂದಿಯನ್ನು ನೇಮಿಸುವುದು.

* ನೋಂದಣಿ ಕೇಂದ್ರಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡರೆ ನೋಂದಣಿ ಕಾರ್ಯಕ್ಕೆ ತೊಂದರೆಯಾಗದಂತ ಬ್ಯಾಟರಿ ಬ್ಯಾಕ್‌ಅಪ್ ಮತ್ತು ಸುಸ್ಥಿತಿಯಲ್ಲಿರುವ ಪ್ರಿಂಟರ್ ವ್ಯವಸ್ಥೆ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು.

* ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ Helpdesk ಅನ್ನು ಸ್ಥಾಪಿಸುವುದು.

 * ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರಜಾಪ್ರತಿನಿಧಿಗಳ ಪಟ್ಟಿಯನ್ನು ಪಡೆದು ಅವರ ನೋಂದಣಿ ಮಾಡಿಸುವುದು. ತಾಲ್ಲೂಕು ಮಟ್ಟದಲ್ಲಿ ಅವರಿಗೆ ತರಬೇತಿ ಒದಗಿಸುವುದು.

* ಫಲಾನುಭವಿಗಳ ನೋಂದಣಿ ಕೇಂದ್ರಗಳಲ್ಲಿ ಮಳೆಯಿಂದ ರಕ್ಷಿಸಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವುದು.

* ಪ್ರತಿ ನೋಂದಣಿ ಕೇಂದ್ರಕ್ಕೆ ನಿಯೋಜಿಸಿದ ನೋಡಲ್‌ ಅಧಿಕಾರಿಯ ವಿವರಗಳನ್ನು ಇ-ಆಡಳಿತ ಇಲಾಖೆ ಒದಗಿಸುವ ಲಿಂಕ್‌ನಲ್ಲಿ ಅಪ್‌ಲೋಡ್ ಮಾಡುವುದು.

ನೋಂದಣಿ ಮಾಡಿಕೊಳ್ಳಲು ಬ್ಯಾಂಕ್ ಪಾಸ್ ಬುಕ್ ಪ್ರತಿ, ಪಡಿತರ ಕಾರ್ಡ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ಅಗತ್ಯವಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

LEAVE A REPLY

Please enter your comment!
Please enter your name here