ಬೆಂಗಳೂರು: ವಿಧಾನಸೌಧದಲ್ಲಿ ಪ್ರತಿಭಟನೆಯ ವೇಳೆ ಅಸ್ವಸ್ಥಗೊಂಡ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನ ಆಸ್ಪತ್ರೆ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ ಹಿನ್ನಲೆ ಸ್ವೀಕರ್ ಯು ಟಿ ಖಾದರ್ ಬಿಜೆಪಿಯ 10 ಮಂದಿ ಶಾಸಕರನ್ನು ವಿಧಾನಸಭೆ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿತ್ತು. ಈ ವೇಳೆ ಸ್ವೀಕರ್ ಆದೇಶದ ಮೇರೆಗೆ ಮಾರ್ಷನ್ ಗಳು ಬಿಜೆಪಿ ಶಾಸಕರನ್ನ ಹೊರ ಹಾಕುವ ವೇಳೆ ಬಿಜೆಪಿ ಶಾಸಕರಿಗೂ ಮಾರ್ಷನ್ ಗಳಿಗೂ ಜಟಾಪಟಿ ಏರ್ಪಟ್ಟಿತ್ತು. ಈ ವೇಳೆ ಅಸ್ವಸ್ಥರಾಗಿ ಕುಸಿದುಬಿದ್ದ ಯತ್ನಾಳ್ ಅವರನ್ನ ವಿಧಾನಸೌಧದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇನ್ನು ಈ ನಡುವೆ ಆಸ್ಪತ್ರೆ ಭೇಟಿ ಕೊಟ್ಟ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆರೋಗ್ಯ ವಿಚಾರಿಸಿ, ಆರೋಗ್ಯದ ಕಡೆ ಗಮನಕೊಡುವಂತೆ ಸಲಹೆ ನೀಡಿದ್ದಾರೆ. ಇನ್ನೂ ಆಸ್ಪತ್ರೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸ್ವೀಕರ್ ಯು ಟಿ ಖಾದರ್ ಸೇರಿದಂತೆ ಹಲವು ನಾಯಕರು ಬಸವನಗೌಡ ಪಾಟೀಲ್ ಯತ್ನಾಳ್ ಅವರ ಆರೋಗ್ಯ ವಿಚಾರಿಸಿದ್ದಾರೆ.
Home ತಾಜಾ ಸುದ್ದಿ ಕುಸಿದು ಬಿದ್ದು ಅಸ್ವಸ್ಥರಾದ ಯತ್ನಾಳ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಖಾದರ್