ಮಂಗಳೂರು : ನಗರದ ಎರಡು ಕಡೆ ಮಾರಾಟ ಮಾಡುತ್ತಿದ್ದ ಸುಮಾರು 100 ಕೆಜಿ ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ ಗಳನ್ನು ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಮಾದಕ ವಸ್ತು ಮಿಶ್ರಿತ ಬಾಂಗ್ ಎಂಬ ಚಾಕೊಲೆಟ್ ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಒಟ್ಟು ಸುಮಾರು 100ಕೆಜಿ ಚಾಕೊಲೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದ ರಥಬೀದಿಯಲ್ಲಿ ಮನೋಹರ್ ಶೇಟ್ ಮತ್ತು ನಗರದ ಫಳ್ನೀರ್ ನ ಗೂಡಂಗಡಿಯಲ್ಲಿ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ಎಂಬವರನ್ನು ಬಂಧಿಸಲಾಗಿದೆ. ಈ ಚಾಕೊಲೆಟ್ ನ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಕಳುಹಿಸಿದ್ದು, ಮುಂಬರುವ ವರದಿಗಳ ಪ್ರಕಾರ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.