ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ರಾಜ್ಯದಲ್ಲಿ ಬಾರಿ ಸಂಚಲನ ಸೃಷ್ಟಿಸಿದೆ. ಇತ್ತೀಚೆಗೆ ಸಿಬಿಐ ಕೋರ್ಟ್ ಆರೋಪಿ ಎಂದು ಜೈಲಿನಲ್ಲಿದ್ದ ಸಂತೋಷ್ ರಾವ್ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ದೋಷ ಮುಕ್ತಗೊಳಿಸಿತ್ತು. ಈ ತೀರ್ಪಿನ ಬಳಿಕ ಸೌಜನ್ಯ ಪ್ರಕರಣ ಮತ್ತೆ ಭುಗಿಲೆದ್ದಿದೆ. ನ್ಯಾಯಕ್ಕಾಗಿ ಸೌಜನ್ಯ ಪೋಷಕರು ಹಾಗೂ ಕೆಲ ಸಂಘಟನೆಗಳು ಹೋರಾಟ ನಡೆಸುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಇದೇ ಸೌಜನ್ಯ ಪ್ರಕರಣ ಸಿನಿಮಾ ಆಗುತ್ತಿದೆ. ಬೆಂಗಳೂರಿನ ಫಿಲ್ಮ್ ಚೇಂಬರ್‌ನಲ್ಲಿ ಸೌಜನ್ಯ ಚಿತ್ರದ ಹೆಸರು ನೊಂದಣಿಯಾಗಿದೆ. ಸ್ಟೋರಿ ಆಫ್ ಸೌಜನ್ಯ ಹೆಸರಿನಲ್ಲಿ ಹೆಸರು ನೋಂದಣಿಯಾಗಿದೆ. ಖ್ಯಾತ ನಿರ್ದೇಶಕ ಲವ ನಿರ್ದೇಶನದಲ್ಲಿ ಚಿತ್ರ ಸೆಟ್ಟೇರಲಿದೆ. ಇಂದು ಸಾಮಾಜಿಕ ಚಿತ್ರವಾಗಲಿದೆ ಎಂದು ನಿರ್ದೇಶಕರು ಲವ ಹೇಳಿದ್ದಾರೆ. ಇನ್ನು ಜೆಕೆ ವೆಂಚರ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ.