ಮಂಗಳೂರು: ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಮಂಗಳೂರಿನ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರಿಗೆ ನೋಟಿಸ್ ನೀಡಲಾಗಿದೆ.
ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಪ್ರಶ್ನಿಸಿ ಆದೇಶ ಮಾಡಿ, ಪೊಲೀಸರು ನೋಟಿಸ್ ನೀಡಿದ್ದು, ಶುಕ್ರವಾರ ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಆದೇಶ ಸಾಧ್ಯತೆಯಿದೆ. ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ ಗಳಿಂದ ಗಡಿಪಾರಿಗೆ ವರದಿ ಪಡೆಯಲಾಗಿದ್ದು, ಕಾನೂನು ಪ್ರಕಾರ ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗಿದೆ.