ಮಂಗಳೂರು: ಕಾರಿಗೆ ಪೆಟ್ರೋಲ್ ತುಂಬಿಸಿ ಹಣ ಪಾವತಿಸದೆ ಪರಾರಿಯಾಗಿರುವ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜು.20ರಂದು ರಾತ್ರಿ 11.19ಕ್ಕೆ ಕಾವೂರಿನ ಪೆಟ್ರೋಲ್ ಪಂಪ್‌ನಲ್ಲಿ ನೀಲಿ ಬಣ್ಣದ ರೆನೋಲ್ಟ್ ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿದ ಅಪರಿಚಿತ 4,100.60 ರೂ.
ಬಿಲ್ ಪಾವತಿಸದೆ ವೇಗವಾಗಿ ಕಾವೂರು ಜಂಕ್ಷನ್ ಕಡೆಗೆ ಪರಾರಿಯಾಗಿದ್ದಾನೆ.
ಪೆಟ್ರೋಲ್ ಪಂಪ್ ಸಿಬಂದಿ ಕಾರನ್ನು ಬೆನ್ನೆಟ್ಟಿ ಓಡಿ ನೋಡಿದಾಗ ಕಾರಿನ ಎದುರು ಮತ್ತು ಹಿಂಬದಿ ನೋಂದಣಿ ಸಂಖ್ಯೆ ಇರಲಿಲ್ಲ ಎಂದು ತಿಳಿದುಬಂದಿದೆ.