ಚಿಕ್ಕಮಗಳೂರು: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ನೆಲ್ಲೀಬಿಡು ಸೇತುವೆ ಮುಳುಗಡೆಯಾಗಿದೆ. ಕಳಸದಿಂದ ಉಡುಪಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169 ಬಂದ್ ಆಗಿದೆ ಎಂದು ತಿಳಿದು ಬಂದಿದೆ.
ಕಳಸ ದಿಂದ ಕುದುರೆಮುಖ ಮಾರ್ಗವಾಗಿ ಉಡುಪಿ ಜಿಲ್ಲೆಗೆ ಸಂಪರ್ಕಿಸುವ ಸೇತುವೆ ಬಂದ್ ಆಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
ಪ್ರವಾಹದ ಮಟ್ಟ ಮೀರಿ ಜಾಂಬಳೆ ಹೊಳೆ ಹರಿಯುತ್ತಿದೆ ಎಂದು ಮಾಹಿತಿ ನೀಡಲಾಗಿದೆ.