ಉಡುಪಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಗೃಹದಲ್ಲಿ ವಿದ್ಯಾರ್ಥಿನಿಯರೇ ಮೊಬೈಲ್ ಇಟ್ಟು ಚಿತ್ರೀಕರಣ ನಡೆಸಿದ ಪ್ರಕರಣ ಹೇಯ ಕೃತ್ಯ. ಇದು ಸಾಮಾನ್ಯ ವಿಷಯವಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರೇ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಸೂಕ್ತ ತನಿಖೆ ನಡೆಸಿ ಪ್ರಕರಣ ಹಿಂದೆ ಯಾರು ಕುಮ್ಮಕ್ಕು ನೀಡಿದ್ದಾರೆ ಎನ್ನುವುದನ್ನು ವಿಚಾರಣೆ ನಡೆಸಿ ಕಾನೂನು ರೀತಿಯ ಶಿಕ್ಷೆ ನೀಡುವಂತಾಗಬೇಕು. ಆ ಮೂವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದರೆ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಇಡೀ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಗಳ ಹಿಂದೆ ಯಾರು ಇದ್ದಾರೆ ಎನ್ನುವುದನ್ನೂ ತನಿಖೆ ನಡೆಸಿ ಇನ್ನು ಇಂತ ಅಮಾನವೀಯ ಕೃತ್ಯ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಕಾಲೇಜು ಆಡಳಿತ ಮಂಡಳಿ ಮತ್ತು ಪೊಲೀಸ್ ಇಲಾಖೆಯನ್ನು ಆಗ್ರಹಿಸುತ್ತಿದ್ದೇನೆ.
ಪದ್ಮರಾಜ್ ಆರ್.
ವಕೀಲರು ಮತ್ತು ನೋಟರಿ ಮಂಗಳೂರು
ಪ್ರಧಾನ ಕಾರ್ಯದರ್ಶಿ ಕೆಪಿಸಿಸಿ