Home ಕರಾವಳಿ ಜು.27ರವರೆಗೆ ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಜು.27ರವರೆಗೆ ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

0
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಜುಲೈ 27ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಹಾಸನ, ಯಾದಗಿರಿ, ಕಲಬರಗಿ, ಧಾರವಾಡ, ಬೆಳಗಾವಿ, ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.


ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿತ್ತು, ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿತ್ತು. ಕ್ಯಾಸಲ್​ರಾಕ್, ಯಲ್ಲಾಪುರ, ಕಾರ್ಕಳ, ಸಿದ್ದಾಪುರ,ಕದ್ರಾ, ಮಂಚಿಕೆರೆ, ಜೋಯಿಡಾ, ಲೋಂಡಾ, ಶೃಂಗೇರಿ, ಕೊಪ್ಪ, ಕೊಲ್ಲೂರು, ಜಯಪುರ, ಲಿಂಗನಮಕ್ಕಿ, ಗೇರುಸೊಪ್ಪ, ಸಿದ್ದಾಪುರ, ಬೆಳ್ತಂಗಡಿ, ತಾಳಗುಪ್ಪ, ಕಮ್ಮರಡಿ, ಕೊಟ್ಟಿಗೆಹಾರ, ಸೋಮವಾರಪೇಟೆ, ಪುತ್ತೂರು, ಧರ್ಮಸ್ಥಳದಲ್ಲಿ ಭಾರೀ ಮಳೆಯಾಗಿದೆ.

LEAVE A REPLY

Please enter your comment!
Please enter your name here