ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ. ಸುಳ್ಯ ತಾಲೂಕಿನಲ್ಲೂ ರಜೆ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ಕಾಲೇಜುಗಳ ವರೆಗೆ) ಮಂಗಳವಾರ ರಜೆ ಘೋಷಿಸಲಾಗಿದೆ.