ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.