Home ಕರಾವಳಿ ಮುಡಿಪು ಜಂಕ್ಷನ್ ನಲ್ಲಿ ಭೀಕರ ಅಪಘಾತ

ಮುಡಿಪು ಜಂಕ್ಷನ್ ನಲ್ಲಿ ಭೀಕರ ಅಪಘಾತ

0

ಮಂಗಳೂರು; ಬಸ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ ನಲ್ಲಿ ನಿನ್ನೆ ರಾತ್ರಿ ನಡೆದಿದೆ.ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ್ನಿನಲ್ಲಿ ತಿರುಗುವಾಗ , ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬಸ್ ನ ಮುಂಭಾಗದಲ್ಲಿ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.


LEAVE A REPLY

Please enter your comment!
Please enter your name here