ಮಂಗಳೂರು: ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಬಿಜೆಪಿ ಯುವಮೋರ್ಚಾ ಮಂಗಳೂರು ದಕ್ಷಿಣ ಮಂಡಲದ ವತಿಯಿಂದ ಕದ್ರಿಯಲ್ಲಿರುವ ಯುದ್ಧ ಸ್ಮಾರಕಕ್ಕೆ ತೆರಳಿ ಗೌರವಾರ್ಪಣೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ಅಧ್ಯಕ್ಷರಾದ ಸಚಿನ್ ರಾಜ್ ರೈ, ಪ್ರಧಾನ ಕಾರ್ಯದರ್ಶಿ ಜಿತೇಶ್, ಉಪಾಧ್ಯಕ್ಷರಾದ ಮೌನಿಶ್ ಚೌಟ, ಸದಸ್ಯರಾದ ಆಕಾಶ್, ಕಾರ್ತಿಕ್, ಯುವಮೋರ್ಚಾ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಗೌತಮ್, ಪ್ರಧಾನ ಕಾರ್ಯದರ್ಶಿ ಪ್ರೀತಮ್ ಅಂಚನ್, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



