ಬೆಂಗಳೂರು: ಉಡುಪಿ ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಗೃಹಸಚಿವ ಡಾ.ಜಿ. ಪರಮೇಶ್ವರ್ ಸ್ನೇಹಿತರಲ್ಲಿ ಇಂತಹ ಘಟನೆಗಳು ನಡೆಯುತ್ತೆ ಎಂದಿದ್ದಾರೆ.
ಅಲ್ಲದೇ ಅದೆಲ್ಲ ಅಲ್ಲಿಗೆ ಬಿಟ್ಟು ಹೋಗುತ್ತಿತ್ತು ಎಂದು ಹೇಳಿದ್ದು, ಅಂತಹ ಘಟನೆ ಕುರಿತು ಪ್ರಿನ್ಸಿಪಾಲ್ಗೆ ಬಿಡಬೇಕು.
ಅದಕ್ಕೆ ಅವರನ್ನ ಸಸ್ಪೆಂಡ್ ಮಾಡೋದಾದರೇ ಅಥವಾ ಇನ್ನು ಹೆಚ್ಚಿನ ಕ್ರಮ ಬೇಕು ಅಂದರೆ ಅವರೇ ತೆಗೆದುಕೊಳ್ಳುತ್ತಾರೆ,ಅದು ಅವರಿಗೆ ಬಿಟ್ಟಿದ್ದು ಎಂದಿದ್ದಾರೆ.
ನಾವು ಇದಕ್ಕೆ ಮಧ್ಯಪ್ರವೇಶ ಮಾಡಬಾರದು ಎಂದರು. ಇನ್ನು ಘಟನೆ ಕುರಿತು ಈಗಾಗಲೇ ಪೊಲೀಸರು ಸೊಮೋಟೋ ದಾಖಲಿಸಿಕೊಂಡಿದ್ದಾರೆ. ತನಿಖೆ ಆಗುತ್ತೆ, ಸತ್ಯಾ ಸತ್ಯತೆ ಹೊರ ಬರುತ್ತೆ ಎಂದಿದ್ದಾರೆ.