Home ಕರಾವಳಿ ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ, 222 ಮಂದಿ ಡ್ರೈವಿಂಗ್ ಲೈಸೆನ್ಸ್ ರದ್ದು….!!

ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ, 222 ಮಂದಿ ಡ್ರೈವಿಂಗ್ ಲೈಸೆನ್ಸ್ ರದ್ದು….!!

0

ಮಂಗಳೂರು : ಸಂಚಾರಿ ನಿಯಮಗಳನ್ನು ಪಾಲಿಸದ ವಾಹನ ಚಾಲಕರಿಗೆ ಇದೀಗ ಪೊಲೀಸರು ಸರಿಯಾಗೇ ತಿರುಗೆಟು ನೀಡಲು ಮುಂದಾಗಿದ್ದು, ದಂಡದ ಜೊತೆಗ ಇದೀಗ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಮುಂದಾಗಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರು ಈಗಾಗಲೇ 222 ಮಂದಿ ವಾಹನ ಚಾಲಕರ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಆರ್ ಟಿಓಗೆ ಶಿಫಾರಸ್ಸು ಮಾಡಿದ್ದಾರೆ.


ಸಂಚಾರಿ ನಿಯಮ ಪಾಲಿಸದೇ ಎಸ್ಕೇಪ್ ಆಗುತ್ತಿದ್ದವರಿಗೆ ಇದು ಶಾಕಿಂಗ್ ನ್ಯೂಸ್ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 14 ದಿನದಲ್ಲಿ ಅಂದರೆ ಜುಲೈ 13 ರಿಂದ ಜುಲೈ 26 ರವರೆಗೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿರುವ ಹಾಗೂ ಸಂಚಾರ ನಿಯಮ ಪಾಲನೆ ಮಾಡದೇ ಇರುವ ವಾಹನ ಚಾಲಕರ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಆರ್ ಟಿಓಗೆ ಶಿಫಾರಸು ಮಾಡಿದ್ದಾರೆ. ಸದ್ಯ 222 ಚಾಲಕರ ಡಿಎಲ್ ರದ್ದು ಮಾಡುವಂತೆ ಸಾರಿಗೆ ಇಲಾಖೆಗೆ ಶಿಫಾರಸ್ಸು ಮಾಡಲಾಗಿದೆ.

ಅದರಲ್ಲಿ ಅತೀವೇಗ ಮತ್ತು ನಿರ್ಲಕ್ಷ್ಯದ ಚಾಲನೆ – 113
ಡ್ರಿಂಕ್ ಆಂಡ್ ಡ್ರೈವ್ – 1
ಸರಕು ಸಾಗಾಟ ವಾಹನಗಳಲ್ಲಿ ಪ್ರಯಾಣಿಕರ ಸಾಗಾಟ ಪ್ರಕರಣಗಳು -16
ಮೊಬೈಲ್ ಫೋನ್ ಬಳಕೆ – 4
ಸಿಗ್ನಲ್ ಜಂಪಿಂಗ್ -5
ವಾಣಿಜ್ಯ ವಾಹನದಲ್ಲಿ ಪ್ರಯಾಣಿಕರ ಸಾಗಾಟ – 4
ಟ್ರಿಪಲ್ ರೈಡಿಂಗ್ ಪ್ರಕರಣ -3
ಹೆಲ್ಮೆಟ್ ಧರಿಸದೆ ಸಂಚಾರ -59
ಸೀಟ್ ಬೆಲ್ಟ್ ಹಾಕದೆ ಚಾಲನೆ -17

LEAVE A REPLY

Please enter your comment!
Please enter your name here