ಪಡುಬಿದ್ರಿ: ಎಲ್ಲೂರಿನಲ್ಲಿ ಕಾರ್ಯಾಚರಿಸುತ್ತಿರುವ ಅದಾನಿ ಪವರ್ ಪ್ಲಾಂಟ್ ಕಂಪೆನಿಯಲ್ಲಿ ಕ್ರೇನ್ ಅವಘಡ ಸಂಭವಿಸಿದ್ದು, ರಾಜಸ್ಥಾನ ಮೂಲದ ವ್ಯಕ್ತಿ ಮೃತಪಟ್ಟ,ಮೂವರು ಗಾಯಗೊಂಡ ಘಟನೆ ಸಂಭವಿಸಿದೆ. ಕ್ರೇನ್ ನ ರೋಪ್ ತುಂಡಾಗಿ ಕಟ್ಟಡದ ಬೀಮ್ ನೆಲಕ್ಕುರುಳಿ ಅವಘಡ ಸಂಭವಿಸಿದ್ದು, 23ರ ಹರೆಯದ ಯುವಕನೊಬ್ಬ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಕ್ರವಾರ ಮಧ್ಯಾಹ್ನದ ವೇಳೆ ಕ್ರೇನ್ ಮೂಲಕ ರೋಪ್ ಕಟ್ಟಿಕೊಂಡು ಸುರಕ್ಷತಾ ಕ್ರಮವಾಗಿ 3 ಜನ ಕೆಲಸ ಮಾಡುತ್ತಿದ್ದರು. ಇನ್ನು ಉಳಿದ 2 ಮಂದಿ ಯಾವುದೇ ಸುರಕ್ಷತೆ ಇಲ್ಲದೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂಧರ್ಭ ಕ್ರೇನ್ ನ ರೋಪ್ ತುಂಡಾಗಿ ಕಟ್ಟಡದ ಬೀಮ್ ನೆಲಕ್ಕುರುಳಿದೆ. 3 ಜನ ರೋಪ್ ನಲ್ಲಿಯೇ ಉಳಿದುಕೊಂಡಿದ್ದು, ಇನ್ನು ಉಳಿದ ಇಬ್ಬರಲ್ಲಿ ಒಬ್ಬ ರಾಜಸ್ಥಾನದ 23ರ ಹರೆಯದ ಯುವಕ ನೇರವಾಗಿ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವಾಗ ಹಾದಿಯಲ್ಲಿ ಮೃತಪಟ್ಟಿದ್ದಾನೆ.