![](https://i0.wp.com/prakharanews.com/wp-content/uploads/2025/01/WhatsApp-Image-2025-01-21-at-12.33.45-PM-scaled.jpeg?fit=2048%2C2560&ssl=1)
ದಾವಣಗೆರೆ: ಖಾಸಗಿ ಕ್ಷಣದ ವಿಡಿಯೋ ವೈರಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಗಳಿಬ್ಬರು ಸಾವಿನ ಹಾದಿ ಹಿಡಿದಿರುವ ಆಘಾತಕಾರಿ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.
![](https://i0.wp.com/prakharanews.com/wp-content/uploads/2025/01/WhatsApp-Image-2025-01-22-at-5.17.51-PM.jpeg?fit=1157%2C1600&ssl=1)
![](https://i0.wp.com/prakharanews.com/wp-content/uploads/2025/01/WhatsApp-Image-2025-01-23-at-5.27.18-PM.jpeg?fit=681%2C706&ssl=1)
![](https://i0.wp.com/prakharanews.com/wp-content/uploads/2025/01/girija-1.jpg?fit=1158%2C1756&ssl=1)
ಮೃತರನ್ನು ಆಲೂರಟ್ಟಿ ತಾಂಡಾದ ರತನ್ (20) ಮತ್ತು ಜಗಳೂರು ತಾಲೂಕಿನ ಗ್ರಾಮವೊಂದರ ಯುವತಿ ಎಂದು ಗುರುತಿಸಲಾಗಿದೆ.
![](https://i0.wp.com/prakharanews.com/wp-content/uploads/2025/01/IMG-20241214-WA0021-scaled.jpg?fit=1810%2C2560&ssl=1)
ಇಬ್ಬರೂ ದಾವಣಗೆರೆಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿಗಳಾಗಿದ್ದರು. ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳದುಬಂದಿದೆ.
ಕಾಲೇಜಿನ ಟೆರೆಸ್ ಮೇಲೆ ಇಬ್ಬರು ಏಕಾಂತದಲ್ಲಿರುವುದನ್ನು ಗಮನಿಸಿ, ಅರಿವಿಗೆ ಬಾರದಂತೆ ಪಕ್ಕದ ಕಟ್ಟದಿಂದ ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ವಾಟ್ಸ್ಆಯಪ್ಗಳಲ್ಲಿಯೂ ವಿಡಿಯೋ ಹರಿದಾಡಿತ್ತು. ಅಲ್ಲದೆ, ಕೆಲ ವೆಬ್ಸೈಟ್ಗಳಲ್ಲೂ ಸುದ್ದಿ ಪ್ರಕಟವಾಗಿತ್ತು.
ಖಾಸಗಿ ವಿಡಿಯೋ ವೈರಲ್ ಆಗಿ, ತಲೆತಗ್ಗಿಸುವಂತಾಗಿದ್ದಕ್ಕೆ ತೀವ್ರ ಮನನೊಂದಿದ್ದ ವಿದ್ಯಾರ್ಥಿನಿ ನಿನ್ನೆ ಆತ್ಮಹತ್ಯೆಗೆ ಶರಣಾದಳು. ಆಕೆಯ ಸಾವಿನ ಸುದ್ದಿ ಕೇಳಿದ ಆಲೂರಟ್ಟಿ ತಾಂಡಾದ ರತನ್ ಸಹ ಸಾವನ್ನಪ್ಪಿದ್ದಾನೆ. ರತನ್ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದ. ನಿನ್ನೆ ಸಂಜೆ ಆಲೂರಟ್ಟಿ ತಾಂಡಕ್ಕೆ ಆಗಮಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಕ್ಕಳನ್ನು ಕಳೆದುಕೊಂಡ ಪಾಲಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಯುವಕ ಮತ್ತು ಯುವತಿಯ ಪಾಲಕರು ಪ್ರತ್ಯೇಕವಾಗಿ ದೂರು ದಾಖಲಿಸಿದ್ದಾರೆ.