Home ತಾಜಾ ಸುದ್ದಿ ಗುಡ್‌ ನ್ಯೂಸ್:‌ ಆಗಸ್ಟ್‌ 1ರಿಂದ ʻಗೃಹಜ್ಯೋತಿ ಯೋಜನೆʼ ಅಧಿಕೃತವಾಗಿ ಆರಂಭ

ಗುಡ್‌ ನ್ಯೂಸ್:‌ ಆಗಸ್ಟ್‌ 1ರಿಂದ ʻಗೃಹಜ್ಯೋತಿ ಯೋಜನೆʼ ಅಧಿಕೃತವಾಗಿ ಆರಂಭ

0

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ʻಗೃಹಜ್ಯೋತಿ ಯೋಜನೆʼ ಆಗಸ್ಟ್ 1ರಿಂದ ಅಧಿಕೃತವಾಗಿ ಆರಂಭವಾಗಲಿದ್ದು, ಸೆಪ್ಟೆಂಬರ್ ತಿಂಗಳಿನಿಂದ ಶೂನ್ಯ ವಿದ್ಯುತ್ ಬಿಲ್ ಬರಲಿದೆ ಎಂದು ಮಾಹಿತಿ ತಿಳಿದುಬಂದಿದೆ.

ಈ ಉಚಿತ ವಿದ್ಯುತ್‍ನ ಲಾಭವನ್ನು ಪಡೆಯಲು ಜುಲೈ 25ರ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಿರುವ ಫಲಾನುಭವಿಗಳು ಮಾತ್ರ ಅರ್ಹರಾಗಿರುತ್ತಾರೆ.

ಇಲ್ಲಿಯವರೆಗೆ ಗೃಹಜ್ಯೋತಿ ಯೋಜನೆಗೆ 1,18,50,474 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಆದ್ರೆ, ಇನ್ನೂ ಶೇ.40ರಷ್ಟು ಗ್ರಾಹಕರು ಅರ್ಜಿ ಸಲ್ಲಿಸಲು ಬಾಕಿ ಉಳಿದಿದ್ದು, ಜುಲೈ 25ರ ನಂತ್ರ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ಸೆಪ್ಟೆಂಬರ್ ತಿಂಗಳಲ್ಲಿ ಸಿಗಲಿದೆ.

ರಾಜ್ಯದ ಕಾಂಗ್ರೆಸ್‌ ಸರ್ಕಾರ ಘೋಷಿಸಿದಂತೆ ರಾಜ್ಯದ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್‌ ವಿದ್ಯುತ್‌ ಉಚಿತವಾಗಿರುತ್ತದೆ. ಆದಾಗ್ಯೂ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯೂನಿಟ್‌ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಿತ್ತಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here