Home ಉಡುಪಿ ಕಲ್ಲಿನ ಕೋರೆಯಲ್ಲಿ ಸ್ಪೋಟಕ್ಕೆ ಪ್ರಾಣ ಬಲಿ-ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯವರಿಗೆ ಪತ್ರದ ಮೂಲಕ ಮನವಿ

ಕಲ್ಲಿನ ಕೋರೆಯಲ್ಲಿ ಸ್ಪೋಟಕ್ಕೆ ಪ್ರಾಣ ಬಲಿ-ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯವರಿಗೆ ಪತ್ರದ ಮೂಲಕ ಮನವಿ

0

ಕಾರ್ಕಳದಲ್ಲಿ ನಡೆಯುವ ಅಕ್ರಮ ಕಲ್ಲು ಗಣಿಗಾರಿಕೆಗೆ ಒಂದು ಪ್ರಾಣ ಬಲಿಯಾಗಿದೆ, ಈ ಅನಾಹುತಕ್ಕೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ, ಇಂತಹ ಅಧಿಕಾರಿಗಳ ವಿರುದ್ದ‌ ಕಠಿಣ ಕ್ರಮಕ್ಕೆ ಜರುಗಿಸುವಂತೆ ಆಗ್ರಹಿಸಿ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಪುರಸಭಾ ಸದಸ್ಯ ಬ್ಲಾಕ್ ಕಾಂಗ್ರೇಸ್ ವಕ್ತಾರ ಶುಭದರಾವ್ ತಿಳಿಸಿದ್ದಾರೆ.


ತಾಲೂಕಿನಾದ್ಯಂತ ಅಕ್ರಮ ಕಲ್ಲುಗಣಿಗಾರಿಗೆ ನಡೆಯುವ ಮತ್ತು ಅದರಿಂದಾಗುವ ಅನಾಹುತಗಳ ಬಗ್ಗೆ ವಾರದ ಹಿಂದೆಯಷ್ಟೇ ಜಿಲ್ಲಾದಿಕಾರಿಯವರಿಗೆ ಮನವಿ ಸಲ್ಲಿಸಿದ್ದೆ ಈ ಬಗ್ಗೆ ವರದಿ ನೀಡುವಂತೆ ಅವರೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಆದರೆ ಆದರೆ ಗಣಿ ಅಧಿಕಾರಿಗಳು ಮತ್ತು ತಾಲೂಕು ಹಿರಿಯ ಅಧಿಕಾರಿಗಳ ನಿರ್ಲಕ್ಷ ಮತ್ತು ವಿಳಂಬ ‌ನೀತಿಗೆ ಕಾರ್ಮಿಕನೊಬ್ಬ ಪ್ರಾಣ ಕಳೆದುಕೊಳ್ಳಬೇಕಾಯಿತು ಇಂತಹ ಅಧಿಕಾರಿಗಳು ಮತ್ತು ಅಕ್ರಮ ಗಣಿಗಾರಿಕೆ ನಡೆಸುವ ವ್ಯಕ್ತಿಗಳ ವಿರುದ್ದ ಕಠಿಣ ಕ್ರಮವಾಗಬೇಕು ಇಲ್ಲವಾದರೆ ಮುಂದೆಯೂ ಇಂತಹ ಅನಾಹುತ ನಡೆಯುವ ಆತಂಕವಿದೆ ಎಂದರು

ನಿನ್ನೆ ಜಿಲ್ಲೆಗೆ ಆಗಮಿಸಿದ ರಾಜ್ಯದ ಮುಖ್ಯಮಂತ್ರಿಗಳು ಸಾರ್ವಜನಿಕರ ಸಮಸ್ಯೆ ಸ್ಪಂದಿಸದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರು ಅಂದೇ ಇಂತಹ ಘಟನೆ ನಡೆದಿರುವುದು ವಿಪರ್ಯಾಸ ಈ ಬಗ್ಗೆ ಮುಖ್ಯ ಮಂತ್ರಿಯವರಿಗೆ ಸಂಪೂರ್ಣ ಮಾಹಿತಿ ನೀಡಿ ಕಠಿಣ ಕ್ರಮಕ್ಕೆ ಮನವಿ ಮಾಡುತ್ತೇನೆ ಎಂದು ಪತ್ತಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here